
ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಇಂದು ಸುಳ್ಯಕ್ಕೆ ಭೇಟಿ ನೀಡಿದರು.
ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ನಗರ ಪಂಚಾಯತ್ ಬಳಿಯಿರುವ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಜಿಲ್ಲಾ ಬಿಜೆಪಿ ಸಮಿತಿ ಯತೀಶ್ ಆರ್ವಾರ್, ವಿಜಯಕುಮಾರ್ ಮುಳುಗಾಡು, ತಾಲೂಕು ಚುನಾವಣಾ ಸಂಚಾಲಕ ಹರೀಶ್ ರೈ ಉಬರಡ್ಕ, ಬಿಜೆಪಿ ಮುಖಂಡರಾದ ವೆಂಕಟ್ ದಂಬೆಕೋಡಿ, ಚಂದ್ರ ಕೋಲ್ಚಾರ್, ಹರೀಶ್ ರೈ ಉಬರಡ್ಕ ಮತ್ತಿತರರು ಉಪಸ್ಥಿತರಿದ್ದರು.