ಪುಸ್ತಕದಲ್ಲಿರುವ ವಿಷಯಗಳನ್ನು ಮಾತ್ರವಲ್ಲದೆ ನಿಜ ಜೀವನದಲ್ಲಿ ಸಿಗುವ ಕೆಲವೊಂದು ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು. ಸಮಾಜದ ಉತ್ತಮ ವ್ಯಕಿಗಳ ಆದರ್ಶ ಗುಣಗಳನ್ನು ತಿಳಿದುಕೊಂಡು ಆದರ್ಶ ವ್ಯಕ್ತಿಗಳಾಗಿ, ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಬದುಕಿದಾಗ ಬದುಕು ಸಾರ್ಥಕವಾಗಲು ಸಾಧ್ಯ ಎಂದು ಬೆಳ್ಳಾರೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕರಾದ ಡಾ ರಾಮಚಂದ್ರ ಕೆ ಹೇಳಿದರು.
ಅವರು ಮಾ.22 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ನಡೆದ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ ಜಯಶ್ರೀ, ಕೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯಶಂಕರ ಹೆಚ್ ಕ್ರೀಡಾ ನಾಯಕರಾದ ಮೋಹಿತ್ ವಿ ಅಂತಿಮ ಬಿ.ಕಾಂ, ಹವ್ಯಶ್ರೀ ಕೆ.ಆರ್ ಅಂತಿಮ ಬಿ.ಕಾಂ ಉಪಸ್ಥಿತರಿದ್ದರು. ಕಾರ‍್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಕರ‍್ಯಕ್ರಮ ನಡೆಯಿತು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಫರ್ಧೆಗಳನ್ನು ಏರ್ಪಡಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ‍್ಯಕ್ರಮ ಆರಂಭಗೊಂಡಿತು. ಹಿಂದಿ ಉಪನ್ಯಾಸಕಿ ಪವನ ಗಣೇಶ್ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಸರಸ್ವತಿ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕಿ ಅನಿತ ಅತಿಥಿಗಳನ್ನು ಪರಿಚಯಯಿಸಿದರು. ಕನ್ಡಡ ಉಪನ್ಯಾಸಕಿ ಶರಿತ ಕಾರ‍್ಯಕ್ರಮ ನಿರೂಪಿಸಿದರು.
- Thursday
- November 21st, 2024