ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯತೆ ಇರುತ್ತದೆ. ಈ ಕಾರಣದಿಂದ ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆ ಗೃಹರಕ್ಷಕರು ಸೇರಿ ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ ನ್ಯಾಯಯುತವಾಗಿ, ಕಾನೂನು ಬದ್ಧವಾಗಿ ನಡೆಸಲು ಬದ್ಧರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಗೃಹರಕ್ಷಕರಿಗೆ ಚುನಾವಣೆ ಕರ್ತವ್ಯ ಅತ್ಯಂತ ಮಹತ್ವದ್ದಾಗಿರುತ್ತದೆ. ಎಲ್ಲಾ ಗೃಹರಕ್ಷಕರು ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸಬೇಕಾಗಿದೆ ಎಂದು ದ.ಕ. ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀಮೋಹನ್ ಚೂಂತಾರು ನುಡಿದರು. ಮಾ. ೨೭ ರಂದು ದ ಕ ಜಿಲ್ಲಾ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಬೆಳ್ಳಾರೆ ಗ್ರಹರಕ್ಷಕ ದಳದ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ಸಿದ್ದತಾ ಸಭೆ ನಡೆಸಿದರು ಮತ್ತು ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತದ ಜೊತೆ ಸಹಕರಿಸಲು ಆದೇಶಿಸಿದರು.
ಈ ಸಂದರ್ಭದಲ್ಲಿ ಬೆಳ್ಳಾರೆ ಘಟಕದ ಘಟಕಾಧಿಕಾರಿ ಶ್ರೀ ವಸಂತ್ ಕುಮಾರ್ ಹಾಗೂ ೨೦ ಗ್ರಹರಕ್ಷಕರು ಉಪಸ್ಥಿತರಿದ್ದರು.
- Saturday
- November 23rd, 2024