Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 146.01 ಕೋಟಿ ರೂ – ಆದಾಯದಲ್ಲಿ ರಾಜ್ಯಕ್ಕೆ ನಂಬರ್ ವನ್


ಸುಬ್ರಹ್ಮಣ್ಯ: ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಸುಬ್ರಹ್ಮಣ್ಯದ ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ ಆದಾಯ ಗಳಿಸಿದೆ. 2023 ಎಪ್ರೀಲ್‌ನಿಂದ 2024 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ ರಾಜ್ಯದ ನಂಬರ್ ದೇವಳವಾಗಿ ಮುಂದುವರೆದಿದೆ.ಕಳೆದ ವರ್ಷ ಶ್ರೀ ದೇವಳವು 123 ಕೋಟಿ ಆದಾಯ ಗಳಿಸಿತ್ತು.
ಹಲವಾರು ವರ್ಷಗಳಿಂದ ನಿರಂತರವಾಗಿ ಆದಾಯ ಗಳಿಕೆಯಲ್ಲಿ ರಾಜ್ಯದ ನಂಬರ್ ದೇವಸ್ಥಾನವಾಗಿ ಹೊರ ಹೊಮ್ಮಿರುವ ಕುಕ್ಕೆಯು ಈ ಬಾರಿ 146.01 ಕೋಟಿ ರೂ ಆದಾಯ ಗಳಿಸುವ ಮೂಲಕ ಸತತವಾಗಿ ನಂಬರ್ ವನ್ ಸ್ಥಾನವನ್ನು ಗಟ್ಟಿಗೊಳಿಸಿದೆ.ಉಳಿದಂತೆ ರಾಜ್ಯ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟ ಕೊಲ್ಲೂರು ಮುಕಾಂಬಿಕಾ ದೇವಳ 68.23 ಕೋಟಿ ರೂ, ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ 30.73 ಕೋಟಿ ರೂ, ಸವದತ್ತಿ ರೇಣುಕಾ ಯಲ್ಲಮ್ಮ 25.80 ಕೋ ರೂ, ಮಂದಾರ್ತಿ ದುರ್ಗಾ ಪರಮೇಶ್ವರಿ ದೇವಸ್ಥಾನ 15.27 ಕೋ.ರೂ, ಕೊಪ್ಪಳ ಜಿಲ್ಲೆ ಹುಲಿಗೆಮ್ಮ ದೇವಿ ದೇವಸ್ಥಾನ 16.29 ಕೋ.ರೂ, ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ 13.65 ಕೋ ರೂ, ಬೆಂಗಳೂರಿನ ಬನಶಂಕರಿ ದೇವಸ್ಥಾನ 11.37 ಕೋ ರೂ ಆದಾಯ ಗಳಿಸಿದೆ.
 ದೇವಸ್ಥಾನಕ್ಕೆ ಮುಖ್ಯವಾಗಿ ಗುತ್ತಿಗೆಗಳಿಂದ, ತೋಟದ ಉತ್ಪನ್ನದಿಂದ, ಕಟ್ಟಡ ಬಾಡಿಗೆಯಿಂದ, ಕಾಣಿಕೆಯಿಂದ, ಕಾಣಿಕೆ ಹುಂಡಿಯಿಂದ, ಹರಿಕೆ ಸೇವೆಗಳಿಂದ, ಅನುದಾನದಿಂದ, ಶಾಶ್ವತ ಸೇವೆಗಳಿಂದ, ಸೇವೆಗಳಿಂದ ಆದಾಯ ಬರುತ್ತಿದೆ.ಶ್ರೀ ದೇವಳದಲ್ಲಿ ಆದಾಯದ ಒಟ್ಟು ಲೆಕ್ಕಾಚಾರ ಈಗಾಗಲೇ ಮುಗಿದಿದೆ.ಉಳಿದಂತೆ ಸೇವೆ ಕಾಣಿಕೆ ಮೊದಲಾದುವುಗಳಿಂದ ಬಂದ ಆದಾಯದ ವಿಭಜನೆ ಇದೀಗ ನಡೆಯುತ್ತಿದ್ದು ಈ ಲೆಕ್ಕಾಚಾರವು ಇನ್ನೆರಡು ದಿನಗಳಲ್ಲಿ ದೊರಕಲಿದೆ.
 2006-07ರಲ್ಲಿ ದೇವಳದ ಆದಾಯವು 19.76 ಕೋಟಿ ರೂ. ಆಯಿತು. 2007-08ರಲ್ಲಿ 24.44 ಕೋಟಿ ರೂ.ಗಳಿಗೆ ಆದಾಯವು ನೆಗೆದು ರಾಜ್ಯದ ಶ್ರೀಮಂತ ದೇವಾಲಯವಾಗಿ ಪರಿಗಣಿತವಾಯಿತು. ನಂತರದ ವರ್ಷಗಳಲ್ಲಿ ರಾಜ್ಯದ ನಂ.1 ದೇವಸ್ಥಾನವೆಂದು ಪರಿಗಣಿಸಲ್ಪಟ್ಟಿತು. 2008-09ರಲ್ಲಿ 31 ಕೋಟಿ ಆದಾಯ,2009-10ರಲ್ಲಿ 38.51 ಕೋಟಿ ರೂ. ಆದಾಯ, 2011-12ರಲ್ಲಿ 56.24 ಕೋಟಿ, 2012-13ರಲ್ಲಿ 66.76 ಕೋಟಿ ರೂ., 2013-14ರಲ್ಲಿ 68 ಕೋಟಿ ರೂ, 2014-15ರಲ್ಲಿ 77.60 ಕೋಟಿ ರೂ, 2015-16ರಲ್ಲಿ 88.83 ಕೋ ರೂ, 2016-17ರಲ್ಲಿ 89.65ರೂ,2017-18ರಲ್ಲಿ 95.92 ಕೋ ರೂ, 2018-19ರಲ್ಲಿ 92.09 ಕೋ ರೂ, 2019-20ರಲ್ಲಿ 98.92 ಆದಾಯ ಗಳಿಸಿತ್ತು. 2020-21 ರಲ್ಲಿ 68.94 ಕೋ.ರೂ, 2021-22 ರಲ್ಲಿ 72.73 ರೂ. ಆದಾಯ ಗಳಿಸಿದರೆ, 2022-23ನೇ ಸಾಲಿನಲ್ಲಿ 123 ಕೋಟಿ ರೂ ಆದಾಯ ಗಳಿಸಿತ್ತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading