2023-24ನೇ ಸಾಲಿನ ದ್ವೀತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.
ಈ ಬಾರಿ ಶೇ.81.15 ಮಂದಿ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ, ವಿಜಯಪುರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ, ಕೊಡಗು ಐದನೇ ಸ್ಥಾನದಲ್ಲಿದೆ. ಗದಗ ಜಿಲ್ಲೆ ಕೊನೇ ಸ್ಥಾನ ಪಡೆದಿದೆ.
ಬೆಳಿಗ್ಗೆ 11 ಗಂಟೆಗೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
karresults.nic.in ಹಾಗೂ pue.kar.nic ನಲ್ಲಿ ಫಲಿತಾಂಶ ವಿಧ್ಯಾರ್ಥಿ ಗಳು ನೋಡಬಹುದು.