Ad Widget

ಕಣೆಮರಡ್ಕ : ವಿಜೃಂಭಣೆಯಿಂದ ನಡೆದ ವಿಷ್ಣುಮೂರ್ತಿ ದೈವದ ನಡಾವಳಿ

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಂಗಳವಾರ ವಿಷ್ಣುಮೂರ್ತಿ ದೈವದ ನಡಾವಳಿ ಕಾರ್ಯಕ್ರಮ ನಡೆಯಿತು.

. . . . . . . . .

ನವೀಕರಣಗೊಂಡ ದೈವಸ್ಥಾನದಲ್ಲಿ ಸೋಮವಾರ ಪ್ರತಿಷ್ಠಾ ಕಾರ್ಯಕ್ರಮ ನಡೆದ ಬಳಿಕ ದೈವದ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ಮಂಗಳವಾರ ಬೆಳಗ್ಗೆ ವಿಷ್ಣುಮೂರ್ತಿ ದೈವದ ನಡಾವಳಿ ಕಾರ್ಯಕ್ರಮ ನಡೆದಾಗ ಸಾವಿರಾರು ಭಕ್ತಾದಿಗಳು ಕಣ್ತುಂಬಿಕೊಂಡರು. ಮಧ್ಯಾಹ್ನ ಅನ್ನಸಂತರ್ಪಣೆಯ ನಂತರ ಮುಳ್ಳುಗುಳಿಗನ ಕೋಲ ನಡೆಯಿತು.

. . . . . . .

ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಕಣೆಮರಡ್ಕ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಊರ ಭಕ್ರ ವೃಂದ ಈ ಸಂದರ್ಭದಲ್ಲಿ ಹಾಜರಿದ್ದು ದೈವದ ಪ್ರಸಾದ ಸ್ವೀಕರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading