Ad Widget

ಪಂಜ ಮೂಲದ 13 ವರ್ಷದ ಬಾಲಕ ಆತ್ಮಹತ್ಯೆ! ಸೈಕಲ್ ರಿಪೇರಿ ಮಾಡುವ ವಿಚಾರದಲ್ಲಿ ನೊಂದು ಕೃತ್ಯ




ಮೂಲತಃ ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ಎಂಬ 13 ವರ್ಷದ ಬಾಲಕ ನೇಣುಬಿಗಿದು ಆ್ಮಹತ್ಯೆಗೈದ ಘಟನೆ ಏ.೧೯ ರಂದು ಸಂಜೆ ಉಪ್ಪಿನಂಗಡಿಯ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸದಲ್ಲಿ ನಡೆದಿದೆ.

. . . . . . . . .

ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು, ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ., ನಂದನ್ ಏಳನೇ ತರಗತಿ ಉತ್ತೀರ್ಣನಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆಹೊಂದಿದ್ದರು.

ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ನಂದನ್ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದರು. ಮನೆಯ ಇನ್ವರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ತಿಳಿಸಿದ್ದರೆನ್ನಲಾಗಿದೆ. ಇದರಿಂದ ಮನನೊಂದ ಆತ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿಕೊಂಡು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading