Ad Widget

ಸಿಂಗಂ ಖ್ಯಾತಿಯ ಅಣ್ಣಾಮಲೈ ನಾಳೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬದಲ್ಲಿ ಬೃಹತ್ ರೋಡ್ ಶೋ .

ಸುಳ್ಯ:ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪರ ಅಣ್ಣಾಮಲೈ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದು ಇದೀಗ ಲೋಕಸಭಾ ಚುನಾವಣಾ ಕಣ ಮತ್ತಷ್ಟು ರಂಗೇರುತ್ತಿದೆ, ಕಡಬ ತಾಲೂಕಿನಲ್ಲಿ ನಾಳೆ ತಮಿಳುನಾಡು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರ ಪರ ಬೃಹತ್ ರೋಡ್ ಶೋ ನಡೆಸುವ ಮೂಲಕ ಅಖಾಡದಲ್ಲಿ ಇನ್ನಷ್ಟು ಕಳೆ ಹೆಚ್ಚಿಸಲಿದ್ದಾರೆ.

. . . . . . . . .

ಏ.23ರ ಬೆಳಗ್ಗೆ 9 ಗಂಟೆಗೆ ಕಡಬ ಪೇಟೆಯಲ್ಲಿ ಬೃಹತ್ ರೋಡ್ ಶೋ ನಡೆಯಲಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಪ್ರಮುಖಪ್ರಚಾರಕರಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ವಿವಿಧ ಮುಖಂಡರು ಸಿಂಗಂಗೆ ಸಾಥ್ ನೀಡಲಿದ್ದು ಈ ರೋಡ್ ಶೋದಲ್ಲಿ ದಕ್ಷಿಣ ಕನ್ನಡ ಎನ್ ಡಿ ಎ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಾಜಿ ಸಚಿವ ಎಸ್.ಅಂಗಾರ, ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ ಸೇರಿದಂತೆ ಪಕ್ಷದ ಹಲವು ಪ್ರಮುಖರು ಸೇರಿದಂತೆ ಈ ಬೃಹತ್ ರೋಡ್‌ಶೋದಲ್ಲಿ ಸಹಸ್ರಾರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading