ಸುಳ್ಯ: ಸುಳ್ಯದ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಇಂದು ಸಂಜೆ ಬೀಸಿದ ಭಾರಿ ಗಾಳಿಗೆ ಕೃಷಿಕರ ಜೀವನೋಪಾಯಕ್ಕಾಗಿ ವಾಣಿಜ್ಯ ಬೆಳೆಯಾದ ಅಡಿಕೆ ಮರಗಳು ಮೇನಾಲ ಬೈಲಿನಲ್ಲಿ ಧರೆಗುರುಳಿ ಅಪಾರ ಪ್ರಮಾಣದಲ್ಲಿ ನಾಶವಾದ ಘಟನೆ ಇದೀಗ ವರದಿಯಾಗಿದೆ.
ಇತ್ತ ಇಂದು ಸಂಜೆ ಅಜ್ಜಾವರದ ಮೇನಾಲದ ವ್ಯಾಪ್ತಿಯಲ್ಲಿ ಮತ್ತು ಮೇದಿನಡ್ಕ , ಪಡ್ಡಂಬೈಲು ಭಾಗದಲ್ಲಿ ಮಾತ್ರ ಭಾರಿ ಗಾಳಿ ಬೀಸಿದ್ದು ವಿದ್ಯುತ್ ಕಂಬಗಳು ಕೂಡ ಹಾನಿಯಾಗಿದೆ. ಇಂದು ರಾತ್ರಿ ಅಜ್ಜಾವರ ವ್ಯಾಪ್ತಿಯಲ್ಲಿನ ಜನತೆ ಕತ್ತಲೆಯಲ್ಲಿ ಕಾಲ ಕಳೆಯಬೇಕಾ ಎಂಬುವುದು ಪ್ರಶ್ನೆಯಾಗಿ ಉಳಿದಿದೆ.