ನಿನ್ನೆ ಬೀಸಿದ ಗಾಳಿಮಳೆಗೆ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ತಲೆಪಳ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯುಂಟಾದ ಘಟನೆ ನಡೆದಿದೆ.
ಆನಂದ ನಾಯ್ಕರವರ ಮನೆಯಲ್ಲಿ ಮರ ಬೀಳುವ ಸಂದರ್ಭದಲ್ಲಿ ಯಾರು ಇಲ್ಲದೆ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತೆರಳಿದ ಆಲೆಟ್ಟಿ ಪಂಚಾಯತ್ ಸದಸ್ಯ
ಸತ್ಯಕುಮಾರ್ ಆಡಿಂಜ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸುವಲ್ಲಿ ಪ್ರಯತ್ನಿಸಿದರು.