Ad Widget

ಬೊಳುಬೈಲು : ಚುನಾವಣಾ ಸಿಬ್ಬಂದಿಯಿಂದ ಪಕ್ಷದೊಂದರ ಪರ ಮತ ಹಾಕಲು ಸೂಚನೆ ಆರೋಪ – ದೂರು ದಾಖಲು – ಸಿಬ್ಬಂದಿಯನ್ನು ಹೊರಹಾಕಿದ ಪೋಲೀಸರು

ಬೊಳುಬೈಲು ಮತದಾನ ಕೇಂದ್ರದಲ್ಲಿ ಕರ್ತವ್ಯ ನಿರತ ಸಂಜೀವಿನಿ ಒಕ್ಕೂಟದ ಸದಸ್ಯೆ ಹಾಗೂ ಸ್ಥಳೀಯ ಗ್ರಾ.ಪಂ. ಸದಸ್ಯರೊರ್ವರ ಮಧ್ಯೆ ಪರಸ್ಪರ ಮಾತಿನ ಚಕಮಕಿ ನಡೆದು, ಸ್ಥಳಕ್ಕೆ ಪೊಲೀಸರು ಆಗಮಿಸಿ, ಸಂಜೀವಿನಿ ಒಕ್ಕೂಟದ ಮಹಿಳೆಯನ್ನು ಮತದಾನ ಕೇಂದ್ರದಿಂದ ಹೊರಗೆ ಕಳುಹಿಸಿದ ಘಟನೆ ನಡೆದಿದೆ.

. . . . . . . . .

ಜಾಲ್ಸೂರು ಗ್ರಾಮ ಪಂಚಾಯತಿಯ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಶೆಟ್ಟಿ ನೆಕ್ರಾಜೆ ಅವರು ತಾಲೂಕು ಪಂಚಾಯತಿ ಅಧೀನದಲ್ಲಿ ಚುನಾವಣೆಯಲ್ಲಿ ಮತದಾರರ ಚೀಟಿ ವಿತರಿಸುವ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಈ ವೇಳೆ ವೇದ ಅವರು ಒಂದು ಪಕ್ಷದ ಪರವಾಗಿ ಮತಹಾಕುವಂತೆ ಮತದಾರರಿಗೆ ಹೇಳುತ್ತಿದ್ದಾರೆ ಎಂದು ಜಾಲ್ಸೂರು ಗ್ರಾ.ಪಂ. ಸದಸ್ಯ ಮಜೀಬ್ ಪೈಚಾರು ಆರೋಪಿಸಿದರು. ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆಯಿತೆನ್ನಲಾಗಿದೆ.

. . . . . . .

ಪಕ್ಷದ ಪರವಾಗಿ ಮತದಾನ ಕೇಂದ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಮುಜೀಬ್ ಅವರು ಸುಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಮತದಾನ ಕೇಂದ್ರಕ್ಕೆ ಆಗಮಿಸಿ, ವೇದಾ ಶೆಟ್ಟಿ ಅವರನ್ನು ಮತದಾನ ಕೇಂದ್ರದಿಂದ ಹೊರಗೆ ಕಳುಹಿಸಿರುವುದಾಗಿ ತಿಳಿದುಬಂದಿದೆ. ಈ ಆರೋಪವನ್ನು ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಶೆಟ್ಟಿ ನೆಕ್ರಾಜೆ ನಿರಾಕರಿಸಿದ್ದಾರೆ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading