ಐವರ್ನಾಡು ಪರ್ಲಿಕಜೆಯ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿತರಾಗಿ ಮೃತಪಟ್ಟಿದ್ದಾರೆ . 54 ವರ್ಷದ ಈ ವ್ಯಕ್ತಿಯು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು . ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಿ ಗಂಟಲದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು . ಇದೀಗ ವರದಿ ಬಂದಿದ್ದು ಕೊರೊನಾ ಪಾಸಿಟಿವ್ ಆಗಿರುವುದಾಗಿ ತಿಳಿದುಬಂದಿದೆ . ಇದರೊಂದಿಗೆ ಸುಳ್ಯದಲ್ಲಿ ಕೊರೋನಾ ಕಾರಣದಿಂದ ಮೂರನೇ ಸಾವು ಸಂಭವಿಸಿದಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಾಖಲೆ ಸಂಖ್ಯೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ . ಇಂದು ಒಂದೇ ದಿನ ಜಿಲ್ಲೆಯಲ್ಲಿ 238 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದೆ . ಸಂಪರ್ಕದಿಂದ 23 ಮ ಜಿಲ್ಲೆಯಲ್ಲಿ ಇಂದು ಒಂದೇ ದಿನ ಆರು ಮಂದಿ ಕೊರೋನಾಗೆ ಬಲಿಯಾಗಿದ್ದಾರೆ . ನಾಲ್ಕು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಕೊರೋನಾದಿಂದ ಸಾವಿಗೀಡಾಗಿದ್ದಾರೆ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ.