ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ಮೇ.02 ರಿಂದ 16 ರವರೆಗೆ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮಕ್ಕಳ ಬೇಸಿಗೆ ಶಿಬಿರ ನಡೆಯಲಿದ್ದು, ಮೇ.02 ರಂದು ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪುರುಷೋತ್ತಮ ಮಣಿಯಾನ ಬೇಸಿಗೆ ಶಿಬಿರವನ್ನು ಉದ್ಘಾಟಿಸಿದರು.
ಬೇಸಿಗೆ ಶಿಬಿರದ ಮೊದಲ ದಿನದ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಇಲ್ಲಿನ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗುರುಪ್ರಸಾದ್ ಬಂಬಿಲ ಉಪಸ್ಥಿತರಿದ್ದು ಮಕ್ಕಳ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ, ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ಕನ್ನಡ ಸಾಹಿತ್ಯ ಪರಿಷತ್ತು ನಿರ್ದೇಶಕ ಯೋಗೀಶ್ ಹೊಸೋಳಿಕೆ, ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ಶ್ರೀಮತಿ ಮಿತ್ರಕುಮಾರಿ ಚಿಕ್ಮುಳಿ, ಉಪಸ್ಥಿತರಿದ್ದರು. ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು. ಸುಮಾರು 29 ವಿದ್ಯಾರ್ಥಿಗಳು, ವಿ.ಆರ್.ಡಬ್ಲ್ಯೂ ಕಾವೇರಿ ಹಾಗೂ ಪೋಷಕರು ಭಾಗವಹಿಸಿದ್ದರು. ಪಂಚಾಯತ್ ಸಿಬ್ಬಂದಿವರ್ಗ ಸಹಕರಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)