Ad Widget

ಎಸ್.ಎಸ್.ಎಲ್.ಸಿ. ಫಲಿತಾಂಶ – ಸುಳ್ಯ ಕ್ಷೇತ್ರ ವ್ಯಾಪ್ತಿಯ 18 ಶಾಲೆಗಳಿಗೆ ಶೇ.100 ಫಲಿತಾಂಶ

2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದುವ ಸುಳ್ಯ ತಾಲೂಕಿಗೆ ಶೇ.96.83 ಫಲಿತಾಂಶ ದಾಖಲಾಗಿದೆ. ಇದರಲ್ಲಿ ಸುಬ್ರಹ್ಮಣ್ಯ ಹಾಗೂ ಎಡಮಂಗಲದ ಶಾಲೆಗಳೂ ಸೇರಿವೆ. ಈ ಬಾರಿ ಸರಕಾರಿ ಶಾಲೆಗಳೂ ಉತ್ತಮ ಸಾಧನೆ ಮಾಡಿದ್ದೂ ಆರು ಶಾಲೆಗಳು ಶೇ. 100 ಫಲಿತಾಂಶ ದಾಖಲಿಸಿದೆ.‌ ಅನುದಾನಿತ ಶಾಲೆಗಳ ಪೈಕಿ ಎರಡು ಶಾಲೆಗಳು ಶೇ.100 ಫಲಿತಾಂಶ ಪಡೆದಿದೆ. ಅನುದಾನ ರಹಿತ (ಖಾಸಗಿ) ಶಾಲೆಗಳ ಪೈಕಿ 10 ಶಾಲೆಗಳು ಶೇ. 100 ಫಲಿತಾಂಶ ಪಡೆದುಕೊಂಡಿದೆ.

. . . . . .

ಸರಕಾರಿ ಶಾಲೆಗಳಾದ ಹರಿಹರಪಲ್ಲತ್ತಡ್ಕ, ಮರ್ಕಂಜ, ಗಾಂಧಿನಗರದ ಐಪಿಎಸ್, ಎಡಮಂಗಲ, ಐವರ್ನಾಡು, ಪಂಜದ ಮೊರಾರ್ಜಿ ವಸತಿ ಶಾಲೆ, ಅನುದಾನಿತ ಶಾಲೆಗಳಾದ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆ, ಸುಳ್ಯದ ಶಾರದಾ ಪ್ರೌಢಶಾಲೆ, ಖಾಸಗಿ ಶಾಲೆಗಳಾದ ಸುಳ್ಯದ ರೋಟರಿ ಆಂಗ್ಲಮಾಧ್ಯಮ, ಸ್ನೇಹ ಶಾಲೆ, ಗ್ರೀನ್ ವ್ಯೂ, ಸುಬ್ರಹ್ಮಣ್ಯದ ಕುಮಾರ ಸ್ವಾಮಿ , ಕಲ್ಲುಗುಂಡಿಯ ಸವೇರಾಪುರ, ನಿಂತಿಕಲ್ಲಿನ ಕೆ.ಎಸ್. ಗೌಡ, ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್, ಎಲಿಮಲೆಯ ಜ್ಞಾನದೀಪ, ವಿನೋಬನಗರದ ವೀವೇಕಾನಂದ, ಗೂನಡ್ಕದ ತೆಕ್ಕಿಲ್ ಪ್ರೌಢಶಾಲೆ ಶೇ. 100 ಫಲಿತಾಂಶ ಪಡೆದು ಸಾಧನೆ ಮಾಡಿದೆ.

ಸುಳ್ಯ ಸ.ಪ.ಪೂ. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 203 ವಿದ್ಯಾರ್ಥಿಗಳಲ್ಲಿ 193 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.95.07 ಫಲಿತಾಂಶ ದಾಖಲಾಗಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರೌಢಶಾಲೆಯಲ್ಲಿ 160 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 156 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.97.50 ಫಲಿತಾಂಶ ದಾಖಲಾಗಿದೆ. ಪಂಜ ಸ.ಪ.ಪೂ ಕಾಲೇಜಿನಲ್ಲಿ ಪರೀಕ್ಷೆಗೆ 23 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.91.30 ಫಲಿತಾಂಶ ದಾಖಲಾಗಿದೆ. ಗುತ್ತಿಗಾರು ಸ.ಪ.ಪೂ ಕಾಲೇಜಿನಲ್ಲಿ ಪರೀಕ್ಷೆಗೆ 90 ವಿದ್ಯಾರ್ಥಿಗಳಲ್ಲಿ 85 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.94.44 ಫಲಿತಾಂಶ ದಾಖಲಾಗಿದೆ. ಅಜ್ಜಾವರ ಸ.ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ 44 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.88.64 ಫಲಿತಾಂಶ ದಾಖಲಾಗಿದೆ. ಹರಿಹರಪಲ್ಲತ್ತಡ್ಕ ಸ.ಪ.ಪೂ ಕಾಲೇಜಿನಲ್ಲಿ ಪರೀಕ್ಷೆಗೆ 4 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಎಲಿಮಲೆ ಸ.ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.94.92 ಫಲಿತಾಂಶ ದಾಖಲಾಗಿದೆ. ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಆಲೆಟ್ಟಿ ಸ.ಪ್ರೌ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 25 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.84.00 ಫಲಿತಾಂಶ ದಾಖಲಾಗಿದೆ. ಎಡಮಂಗಲ ಸ.ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ದುಗಲಡ್ಕ ಸ.ಪ್ರೌ.ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 25 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.96.00 ಫಲಿತಾಂಶ ದಾಖಲಾಗಿದೆ. ಐವರ್ನಾಡು ಸ.ಪ.ಪೂ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಏನೆಕಲ್ಲು ಸ.ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 14 ವಿದ್ಯಾರ್ಥಿಗಳಲ್ಲಿ 13 ಮಂದಿ ತೇರ್ಗಡೆಗೊಂಡಿದ್ದು, ಶೇ.92.85 ಫಲಿತಾಂಶ ದಾಖಲಾಗಿದೆ. ಎಣ್ಮೂರು ಸ.ಪ್ರೌಢಶಾಲೆ ಪರೀಕ್ಷೆಗೆ ಹಾಜರಾದ 69 ವಿದ್ಯಾರ್ಥಿಗಳಲ್ಲಿ 64 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.92.75 ಫಲಿತಾಂಶ ದಾಖಲಾಗಿದೆ. ಸಂಪಾಜೆ ಸ.ಪ್ರೌಢ ಶಾಲೆ (ಆರ್.ಎಂ.ಎಸ್.ಎ)ಯಲ್ಲಿ 19 ವಿದ್ಯಾರ್ಥಿಗಳಲ್ಲಿ 18 ಮಂದಿ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 94.74 ಫಲಿತಾಂಶ ದಾಖಲಾಗಿದೆ. ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿಗಳಲ್ಲಿ 48 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 50 ವಿದ್ಯಾರ್ಥಿಗಳಲ್ಲಿ 48 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು 96.00 ಫಲಿತಾಂಶ ದಾಖಲಾಗಿದೆ. ಸುಬ್ರಹ್ಮಣ್ಯ ಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 80 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.97.50 ಫಲಿತಾಂಶ ಲಭಿಸಿದೆ. ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಪರೀಕ್ಷೆಗೆ ಹಾಜರಾದ 28 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಅರಂತೋಡು ನೆಹರು ಸ್ಮಾರಕ ಪ.ಪೂ. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 110 ವಿದ್ಯಾರ್ಥಿಗಳಲ್ಲಿ 106 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.ಮ96.36 ಫಲಿತಾಂಶ ದಾಖಲಾಗಿದೆ. ಸುಳ್ಯ ಶ್ರೀ ಶಾರದಾ ಮಹಿಳಾ ಪ.ಪೂ ಕಾಲೇಜಿನಲ್ಲಿ ಪರೀಕ್ಷಗೆ 42 ವಿದ್ಯಾರ್ಥಿನಿಯರು ಹಾಜರಾಗಿದ್ದು 42 ವಿದ್ಯಾರ್ಥಿನಿಯರು ತೇರ್ಗಡೆಗೊಂಡಿದ್ದು, ಶೇ. 100 ಫಲಿತಾಂಶ ದಾಖಲಾಗಿದೆ. ಕೊಲ್ಲಮೊಗ್ರ ಕೆ.ವಿ.ಜಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 24 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 91.67 ಫಲಿತಾಂಶ ದಾಖಲಾಗಿದೆ. ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 30 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 90.00 ಫಲಿತಾಂಶ ದಾಖಲಾಗಿದೆ. ಸುಳ್ಯ ರೋಟರಿ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 60 ವಿದ್ಯಾರ್ಥಿಗಳಲ್ಲಿ 60 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ. 100 ಫಲಿತಾಂಶ ದಾಖಲಾಗಿದೆ. ಚೊಕ್ಕಾಡಿ ಶ್ರೀ ಭಗವಾನ್ ಸತ್ಯಸಾಯಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 80 ವಿದ್ಯಾರ್ಥಿಗಳಲ್ಲಿ 79 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ. 98.75 ಫಲಿತಾಂಶ ಲಭಿಸಿದೆ. ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 86 ವಿದ್ಯಾರ್ಥಿಗಳಲ್ಲಿ 86 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಸುಳ್ಯ ಪರಿವಾರಕಾನ ಸ್ನೇಹ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 12 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಸಂಪಾಜೆ ಸವೇರಪುರ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಸುಳ್ಯ ಜಟ್ಟಿಪಳ್ಳ ಗ್ರೀನ್‌ವ್ಯೂ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 30 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೆ.100 ಫಲಿತಾಂಶ ದಾಖಲಾಗಿದೆ. ಸುಳ್ಯ ಸಂತ ಜೋಸೆಫ್ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 111 ವಿದ್ಯಾರ್ಥಿಗಳಲ್ಲಿ 110 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.99.10 ಫಲಿತಾಂಶ ದಾಖಲಾಗಿದೆ. ನಿಂತಿಕಲ್ಲು ಕೆ.ಎಸ್.ಜಿ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 13 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 27 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ. 100 ಫಲಿತಾಂಶ ದಾಖಲಾಗಿದೆ. ಎಲಿಮಲೆ ಜ್ಞಾನದೀಪ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಎಲಿಮಲೆ ಜ್ಞಾನದೀಪ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ.100 ಫಲಿತಾಂಶ ದಾಖಲಾಗಿದೆ. ಜಾಲ್ಸೂರು ವಿವೇಕಾನಂದ ಪ್ರೌಢಶಾಲೆ ವಿನೋಬನಗರದಲ್ಲಿ ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಶೇ. 100 ಫಲಿತಾಂಶ ದಾಖಲಾಗಿದೆ. ಗೂನಡ್ಕ ಬೀಜದಕಟ್ಟೆ ತೆಕ್ಕಿಲ್ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ 5 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದು 5 ವಿದ್ಯಾರ್ಥಿಗಳು ತೇರ್ಗಡೆಗೊಂಡು, ಶೇ.100 ಫಲಿತಾಂಶ ದಾಖಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!