Ad Widget

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ‌ ಮಂಗಳೂರು ವಿ.ವಿ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ-
ಚಾಂಪಿಯನ್ ಪಟ್ಟ ಉಳಿಸಿಕೊಂಡ ಆಳ್ವಾಸ್ ಕಾಲೇಜು ಮೂಡಬಿದಿರೆ

ಉದ್ಘಾಟನಾ ಸಮಾರಂಭ
ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕಾಲೇಜಿನ ಮೈದಾನದಲ್ಲಿ ಮೇ-21ರಂದು ನಡೆಯಿತು. ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿಯ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಮಾಣಿಬೆಟ್ಟು ಪಂದ್ಯಾಟವನ್ನು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಲತಾ ಎಂ ರೈ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯಶಂಕರ ಹೆಚ್ ಉಪಸ್ಥಿತರಿದ್ದರು.

. . . . . . .


ಸಮಾರೋಪ ಸಮಾರಂಭ
ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ಬಹುಮಾನ ವಿತರಕರಾಗಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿಯ ನಿವೃತ್ತ ದೈಹಿಕ ಶಿಕ್ಷಕರಾದ ಚಂದ್ರಶೇಖರ್ ಎಂ ಭಾಗವಹಿಸಿದರು.

ವೇದಿಕೆಯಲ್ಲಿ ಸುಳ್ಯ ತಾಲೂಕು ಧ್ವನಿವರ್ಧಕ ಮತ್ತು ಬೆಳಕು ಇದರ ಸಂಘದ ಕರ‍್ಯದರ್ಶಿ ಜಯಪ್ರಕಾಶ್ ಕೆ, ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಂದ್ಯಾಟದ ವೀಕ್ಷಕರಾಗಿ ಆಗಮಿಸಿದ ಬೆಳ್ಳಾರೆ ಪ್ರಥಮ ದರ್ಜೆ ಕಾಲೇಜು ಇಲ್ಲಿಯ ದೈಹಿಕ ಶಿಕ್ಷಣ ನಿರ್ದೆಶಕರಾದ ರಾಮಚಂದ್ರ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಉಪನ್ಯಾಸಕ ಶಿವಾನಂದ್ ಸ್ವಾಗತಿಸಿ, ನಿರ್ವಹಣಾ ವಿಭಾಗದ ಉಪನ್ಯಾಸಕಿ ಗೀತಾ ವಂದಿಸಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಸುರೇಖಾ ಹೆಚ್ ಬಹುಮಾನಗಳ ಪಟ್ಟಿ ವಾಚಿಸಿದರು. ಹಿಂದಿ ಉಪನ್ಯಾಸಕ ರಾಮಕೃಷ್ಣ ಕರ‍್ಯಕ್ರಮ ನಿರೂಪಿಸಿದರು.


ಬಹುಮಾನ ವಿಜೇತರ ಪಟ್ಟಿ
ಪಂದ್ಯಾಕೂಟದಲ್ಲಿ ಒಟ್ಟು 11 ತಂಡಗಳು ಭಾಗವಹಿಸಿದ್ದು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ, ಸೇಕ್ರೇಡ್ ಹಾರ್ಟ್ ಕಾಲೇಜು ಮಡಂತ್ಯಾರು, ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ, ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡಗಳು ಸೆಮಿಫೈನಲ್ ಪ್ರವೇಶ ಪಡೆದವು. ಸೆಮಿಫೈನಲ್ ನಲ್ಲಿ ಸೇಕ್ರೇಡ್ ಹಾರ್ಟ್ ಕಾಲೇಜು ಮಡಂತ್ಯಾರು ತಂಡ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು. ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡವು ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ತಂಡವನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟಿತು. ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡವು ಸೇಕ್ರೇಡ್ ಹಾರ್ಟ್ ಕಾಲೇಜು ಮಡಂತ್ಯಾರು ತಂಡವನ್ನು ಸೋಲಿಸಿ 18ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿ ಚಾಂಪಿಯನ್ ಪಟ್ಟವನ್ನು ತನ್ನ ಮುಡಿಯಲ್ಲೇ ಇರಿಸಿಕೊಂಡಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!