Ad Widget

ಕುಕ್ಕೆ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ನಿವೃತ್ತಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಮೇ.30ರಂದು ನಿವೃತ್ತರಾಗಿದ್ದಾರೆ. ಕಳೆದ ೩೫ ವರ್ಷಗಳಿಂದ ಸರಕಾರಿ ಸೇವೆಯಲ್ಲಿದ್ದ ಇವರು ೩೩ ವರ್ಷಗಳಿಂದ ಮುಜರಾಯಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಾರ್ಯತತ್ಪರ ಅಧಿಕಾರಿಯಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ಕುಕ್ಕೆ ದೇವಳದ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.ತನ್ನ ಸರಕಾರಿ ಸೇವೆಯನ್ನು ದ.ಕ ಜಿಲ್ಲೆಯಲ್ಲೇ ಆರಂಭಿಸಿ ದ.ಕ ಜಿಲ್ಲೆಯಲ್ಲೇ ನಿವೃತ್ತರಾಗುತ್ತಿರುವುದು ಒಂದು ವಿಶೇಷ.ಕೆಪಿಎಸ್‌ಸಿ ಪರೀಕ್ಷೆ ಬರೆದು ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಆಯ್ಕೆ ಆಗಿ ಧಾರ್ಮಿಕ ದತ್ತಿ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ಇಲಾಖಾ ವಿಭಾಗದಲ್ಲಿ ಕರ್ತವ್ಯ ಆರಂಭಿಸಿದರು. ಬಳಿಕ ಅಧೀಕ್ಷಕ ಹುದ್ದೆಗೆ ಪದೋನ್ನತಿ ಹೊಂದಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ, ಬೆಂಗಳೂರುನ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯ ಸೇರಿದಂತೆ ಇತರ ೧೨ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಬಳಿಕ ಧಾರ್ಮಿಕ ದತ್ತಿ ಇಲಾಖಾ ತಹಶೀಲ್ದಾರ್ ಹುದ್ದೆಗೆ ಪದೋನ್ನತಿ ಹೊಂದಿ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಬೇಲೂರು ಚೆನ್ನಕೇಶವ ದೇವಾಲಯದಲ್ಲಿ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ನೆರವೇರಿಸಿದರು. ನಂತರ ಸಹಾಯಕ ಕಮಿಷನರ್ ಹುದ್ದೆಗೆ ಪದೋನ್ನತಿ ಹೊಂದಿ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ, ವಿಶೇಷ ಜಿಲ್ಲಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದಿ ಬೆಂಗಳೂರುನ ಬನಶಂಕರಿ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಆಗಿ ಬಳಿಕ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

. . . . . .

Related Posts

error: Content is protected !!