Ad Widget

ಸುಳ್ಯ; ಎನ್ನೆಂಸಿ ಪದವಿ ಕಾಲೇಜು ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ





ನಮ್ಮಲ್ಲಿ ತಾಳ್ಮೆ, ನೈತಿಕ ಮೌಲ್ಯಗಳು ಇದ್ದಷ್ಟು ಸಾಧಿಸುವ ಶಕ್ತಿ ಹೆಚ್ಚುತ್ತದೆ. ಜೀವನದ ಅನುಭವಗಳನ್ನು ಯಶಸ್ಸನ್ನು ಗಳಿಸಲು

. . . . .

ಮಾರ್ಗದರ್ಶಿಯಾಗಿ ಬಳಸಿಕೊಳ್ಳಬೇಕು. ಒಬ್ಬ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಕಾಲೇಜು ಮತ್ತು ಉಪನ್ಯಾಸಕರು ಪ್ರಾಮುಖ್ಯ. ಜೀವನದಲ್ಲಿ ಸತ್ಯ ನಿಷ್ಟೆ ಯಶಸ್ಸು ಪಡೆಯುವಿರಿ. ನಾವು ವಿನಯವಂತರಾಗಿರಬೇಕು ಆದರೆ ದೈನ್ಯತೆ ಇರಬಾರದು. ನಿಷ್ಠುರವಾದಿಯಾಗಿರಬೇಕು ದ್ವೇಷ ಬೆಳೆಸಿಕೊಳ್ಳಬಾರದು. ಶೈಕ್ಷಣಿಕ ಜೀವನದಲ್ಲಿ ಯೋಜನೆಯನ್ನು ಮಾಡಿಕೊಳ್ಳಬೇಕು.

ಅವಕಾಶಗಳನ್ನು ಬಳಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಚಿಂತಕರು ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ, ಬೆಳ್ತಂಗಡಿ ಇಲ್ಲಿನ ಅಧ್ಯಾಪಕರಗಿರುವ ನೆಹರೂ ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಅರವಿಂದ ಚೊಕ್ಕಾಡಿ ಹೇಳಿದರು. ಇವರು ಮೇ 31ರಂದು ನೆಹರೂ ಮೆಮೋರಿಯಲ್ ಪದವಿ ಕಾಲೇಜಿನ ವಾರ್ಷಿಕ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.


ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಅಧ್ಯಕ್ಷರಾಗಿರುವ ಡಾ. ಕೆ. ವಿ. ಚಿದಾನಂದರು ಸಂಸ್ಥೆ ನೀಡುತ್ತಿರುವ ಅತ್ಯುತ್ತಮ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಸಾಧನೆಗಳನ್ನು ಮಾಡಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಲೇಜಿನ ಪ್ರಾಂಶಪಾಲರಾದ ಪ್ರೊ. ರುದ್ರಕುಮಾರ್ ವಾರ್ಷಿಕ ವರದಿಯನ್ನು ವಾಚಿಸಿದರು.
ವೇದಿಕೆಯಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ, ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ್ ಪೇರಾಲು, ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ದಾಮೋದರ ಮದುವೆಗದ್ದೆ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಿನ್ನಪ್ಪ ಗೌಡ, ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಲ್ಲಿ ಇತ್ತೀಚೆಗೆ ಡಾಕ್ಟರೇಟ್ ಪದವಿ ಪಡೆದುಕೊಂಡು ಸೇವೆ ಸಲ್ಲಿಸುತ್ತಿರುವ ಪ್ರಾಂಶುಪಾಲರ ಡಾ. ರುದ್ರಕುಮಾರ್ ಎಂ.ಎಂ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಮಮತಾ ಕೆ ಇವರನ್ನು, ಕಾಲೇಜು ಎನ್ ಎಸ್ ಎಸ್ ಘಟಕವನ್ನು ಸತತ 26 ವರ್ಷಗಳಿಂದ ಮುನ್ನಡೆಸಿದ ಸಂಜೀವ ಕುದ್ಪಾಜೆ ಹಾಗೂ ಕಬಡ್ಡಿಯಲ್ಲಿ ಕೆವಿಜಿ ಕ್ರೀಡಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಮಂಗಳೂರು ವಿಶ್ವವಿದ್ಯಾನಿಲಯದ ಕಬಡ್ಡಿ ತಂಡದ ಬೆಸ್ಟ್ ರೈಡರ್ ಆಗಿದ್ದು ಪ್ರೊ ಕಬಡ್ಡಿಯ ತೆಲುಗು ಟೈಟಾನ್ಸ್ ತಂಡವನ್ನು ಪ್ರತಿನಿಧಿಸಿದ್ದ ವಿದ್ಯಾರ್ಥಿ ವಿದ್ಯಾರ್ಥಿ ರತನ್ ನಾಯ್ಕ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಲೇಜಿನಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು, ಕಾಲೇಜಿನ ವಿವಿಧ ಸಂಘಗಳಿಂದ ಆಯೋಜಿಸಿದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೋಸ್ಬಿನ್ ಬಾಬು ಸ್ವಾಗತಿಸಿ, ಸಹ ಕಾರ್ಯದರ್ಶಿ ಕು. ಯಶಿಕಾ ಉದ್ಘಾಟಕರನ್ನು ಪರಿಚಯಿಸಿ, ಕಾರ್ಯದರ್ಶಿ ಕೃಷ್ಣರಾಜ್ ಸಂದೇಶ ವಾಚಿಸಿದರು. ಉಪಾಧ್ಯಕ್ಷೆ ಕು. ನಿರೀಕ್ಷಾ ವಂದಿಸಿದರು. ವಿಶೇಷವಾಗಿ ಡಿಜಿಟಲ್ ಸ್ಕ್ರೀನ್ ನಿಂದ ಅಲಂಕರಿಸಿದ ಕೆವಿಜಿ ಷಷ್ಯಬ್ಧ ರಂಗಮಂದಿರದ ವೇದಿಕೆಯಲ್ಲಿ ವಿಶೇಷವಾಗಿ ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮಧುರಾ ಎಂ ಆರ್, ಸಾಂಸ್ಕೃತಿಕ ಕಾರ್ಯದರ್ಶಿ ಕುಸುಮಾಧರ ಎ ಟಿ, ಸದಸ್ಯರಾದ ಮಂಜುಶ್ರೀ, ಹರ್ಷಿತ್ ಮರ್ಕಂಜ, ಜಯಪ್ರಕಾಶ್ ಪೆರುಮುಂಡ, ಹೇಮಂತ್ ನಾರ್ಕೋಡು ತಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಹಾಗೆಯೇ ಕಾಲೇಜಿನ ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಸಹಕರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!