Ad Widget

ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿಯಲ್ಲಿ ಜ್ಞಾನದೀಪ ಸಂಸ್ಥೆಯ ನವೋದಯ ತರಬೇತಿ ಜೂ.9ರಿಂದ ಆರಂಭ



2024-25ನೇ ಸಾಲಿನಲ್ಲಿ ನವೋದಯ ಮತ್ತು ಮೊರಾರ್ಜಿ ಪ್ರವೇಶ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿಯಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವತಿಯಿಂದ ನವೋದಯ ತರಗತಿಗಳು ಜೂ.9ರಿಂದ ಆರಂಭಗೊಳ್ಳಲಿದೆ. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ಸರಕಾರಿ, ಖಾಸಗಿ, ಅನುದಾನಿತ ಶಾಲೆಯ ವಿದ್ಯಾರ್ಥಿಗಳು ಪ್ರತಿ ಆದಿತ್ಯವಾರ ಮತ್ತು ರಜಾ ದಿನಗಳಲ್ಲಿ  ಈ ತರಬೇತಿ ಪಡೆಯಬಹುದು. ಜ್ಞಾನದೀಪ ಸಂಸ್ಥೆಯು ಕಳೆದ 16 ವರ್ಷಗಳಿಂದ ನವೋದಯ ಪ್ರವೇಶ ಪರೀಕ್ಷೆಗೆ ತರಗತಿಗಳನ್ನು ನಡೆಸುತ್ತಿದ್ದು, ಪ್ರಸಕ್ತ ವರ್ಷ ಇಲ್ಲಿ ತರಬೇತಿ ಪಡೆದ 17 ವಿದ್ಯಾರ್ಥಿಗಳು ನವೋದಯ ಶಾಲೆಯ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಇದುವರೆಗೆ 182 ವಿದ್ಯಾರ್ಥಿಗಳು ಇಲ್ಲಿ ತರಬೇತಿ ಪಡೆದು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಿ, ತರಬೇತಿ ಸಮಯದಲ್ಲಿ ಮಾದರಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸೀಮಿತ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾ ಭವನದಲ್ಲಿ, ಉಪ್ಪಿನಂಗಡಿಯ ವಿದ್ಯಾ ಟ್ಯೂಟೋರಿಯಲ್ ಹಾಗೂ ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಲ್ಲಿ ನಡೆಯುವ ತರಬೇತಿಯಲ್ಲಿ ಭಾಗವಹಿಸಲಿಚ್ಚಿಸುವ ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯ ಕಚೇರಿಯಲ್ಲಿ ಹೆಸರು ನೋಂದಾಯಿಸಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading