Ad Widget

ವಸತಿ ಶಾಲೆಗಳ 7 ಮತ್ತು 8ನೇ ತರಗತಿಯಲ್ಲಿ ಖಾಲಿ ಉಳಿದ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ




ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನೆಲ್ಲಿತೀರ್ಥ, ಗುರುಪುರ ಮೂಡಬಿದ್ರೆಯ ಕಲ್ಲಬೆಟ್ಟು, ಮೂಲ್ಕಿಯ ಕಮ್ಮಾಜೆ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳದ ವಗ್ಗ, ಪುಂಜಾಲಕಟ್ಟೆ ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ/ನಾರಾಯಣ ಗುರು ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 7 ಮತ್ತು 8ನೇತರಗತಿಯಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಮತ್ತು 8ನೇತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ 10ನೇತರಗತಿಯ ವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತç, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುವುದು. ಆಭ್ಯರ್ಥಿಯು ತನ್ನ ಎಸ್‌ಎಟಿಎಸ್ ಸಂಖ್ಯೆ, ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಂಬ0ಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ:20/06/2024 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲಾ ಪ್ರಾಂಶುಪಾಲರನ್ನು ಸಂಪರ್ಕಿಸ ಬಹುದು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading