
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ಮುಲ್ಲೈ ಮುಹಿಲನ್ ಅವರನ್ನು ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿ ಮಾಡಿದರು. ಭೇಟಿಯ ವೇಳೆ ಸುಳ್ಯ ಕ್ಷೇತ್ರದ ತೊಡಿಕಾನದ ಗ್ರಾಮಸ್ಥರ ಬಹುಬೇಡಿಕೆಯ ಬಿಎಸ್‌ಎನ್‌ಎಲ್ ನೆಟ್ವರ್ಕ್ ಸಮಸ್ಯೆಯ ಪರಿಹಾರದ ಕುರಿತು ಮತ್ತು ಮಂಗಳೂರು ವಿಧಾನಸಭಾ ಕ್ಷೇತ್ರದ ಉಚ್ಚಿಲದ ಸ್ಥಳೀಯರ ಕಂದಾಯ ಇಲಾಖೆಗೆ

ಸಂಬoಧಪಟ್ಟ ಸಮಸ್ಯೆಯ ಕುರಿತು ಸಂಸದರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕೈಗೊಳ್ಳಬಹುದಾದ ಸೂಕ್ತ ಪರಿಹಾರ ಕಾರ್ಯದ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.