Ad Widget

ಕೆವಿಜಿ ಐಪಿಎಸ್ ನಲ್ಲಿ ಚುನಾವಣಾ ಪ್ರಣಾಳಿಕೆ



ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜೂ. 14 ರಂದು ವಿದ್ಯಾರ್ಥಿಗಳಲ್ಲಿ ಚುನಾವಣಾ ಅರಿವು ಮೂಡಿಸುವ ಸಲುವಾಗಿ ಚುನಾವಣಾ ಪ್ರಣಾಳಿಕೆಯನ್ನು ನಡೆಸಲಾಯಿತು.

      ಚುನಾವಣಾ ಪ್ರಣಾಳಿಕೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಶಾಲಾ ಸಂಚಾಲಕ  ಡಾ. ಕೆ. ವಿ ರೇಣುಕಾಪ್ರಸಾದ್  ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು. ಪ್ರಾರ್ಥನೆಯೊಂದಿಗೆ ವಿದ್ಯಾರ್ಥಿನಿಯರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ಕಾರ್ಯಕ್ರಮಕ್ಕೆ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ  ಎಮ್. ಕೆ ಶ್ರೀಧರ್  ಅತಿಥಿಯಾಗಿ ಆಗಮಿಸಿ ದೀಪ ಬೆಳಗಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ‘ ಚುನಾವಣಾ ಪ್ರಣಾಳಿಕೆಯ ಮೂಲಕ ವಿದ್ಯಾರ್ಥಿಗಳು ಶಾಲೆಯಲ್ಲಿ ತಮಗಿರುವ ಜವಾಬ್ದಾರಿಗಳನ್ನು ಅರಿತುಕೊಳ್ಳಲು ಸಾಧ್ಯ.ಈ ನಿಟ್ಟಿನಲ್ಲಿ  ವಿದ್ಯಾರ್ಥಿಗಳಿಗೆ ನಾಯಕತ್ವ ದ ಗುಣವನ್ನು ಬೆಳೆಸುವಲ್ಲಿ ಪ್ರಾಂಶುಪಾಲರ  ಮತ್ತು ಶಿಕ್ಷಕ ವೃಂದದವರ ಪ್ರೋತ್ಸಾಹವನ್ನು ಮೆಚ್ಚುವಂತದ್ದು ‘ ಜೊತೆಗೆ ಶಾಲಾ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಅತ್ಯುತ್ತಮ ಕಾರ್ಯ ಕ್ರಮಗಳನ್ನು ಕೈಗೊಂಡು, ವಿದ್ಯಾರ್ಥಿಗಳಲ್ಲಿ ಒಳ್ಳೆಯ ಮೌಲ್ಯವನ್ನು ಮೂಡಿಸುತ್ತದೆ ಎಂದರು.
       2024-25 ನೇ ಸಾಲಿನಲ್ಲಿ ಚುನಾವಣಾ ಕಣಕ್ಕಿಳಿದ ವಿದ್ಯಾರ್ಥಿಗಳೆಲ್ಲರೂ ಚುನಾವಣಾ ಪ್ರಣಾಳಿಕೆಯ ಮೂಲಕ ಮತ  ಯಾಚಿಸಿದ ರೀತಿ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗನ್ನು ತಂದುಕೊಟ್ಟಿತ್ತು. ಈ ಕಾರ್ಯಕ್ರಮವನ್ನು ಎಂಟನೇ ತರಗತಿಯ ಪ್ರತೀಕ್ಷ  ಮತ್ತು ನಿಧಿ ನಿರೂಪಿಸಿದರು. ಆಕೃತಿಯು ಸ್ವಾಗತಿಸಿ, ಮೋದಕ್ ವಂದಿಸಿದನು . ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲರಾದ ಅರುಣ್ ಕುಮಾರ್,ಉಪ ಪ್ರಾಂಶುಪಾಲೆ ಶಿಲ್ಪಬಿದ್ದಪ್ಪ  ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಮುಂದಾಳತ್ವವನ್ನು ಸಮಾಜವಿಜ್ಞಾನದ ಶಿಕ್ಷಕಿಯಾರಾದ ಶ್ರೀಮತಿ ಧನ್ಯ, ಶ್ರೀಮತಿ ಶೋಭಾ  ವಹಿಸಿಕೊಂಡರು . ಕೆವಿಜಿ ಡೆಂಟಲ್ ಕಾಲೇಜಿನ ಡಾ. ಅನುಜ್ಞ ಮತ್ತು ಡಾ. ಶಿಧಾ ಈ ಕಾರ್ಯಕ್ರಮದ  ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!