ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಭಾಷಾಜ್ಞಾನ ಮತ್ತು ಪುರಾಣ ಜ್ಞಾನದ ಬೆಳವಣಿಗೆ ಸಾಧ್ಯ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸುಳ್ಯ ಇದರ ಗೌರವಾಧ್ಯಕ್ಷ ಶ್ರೀ ದಯಾಕರ ಆಳ್ವ ಕುಂಬ್ರ ಹೇಳಿದರು. ಅವರು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆದ ಯಕ್ಷ ಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪ್ರೀತಂ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಕ್ಷ ಗುರು ಶ್ರೀ ಲಕ್ಷ್ಮಣ ಆಚಾರ್ಯ ಎಡಮಂಗಲ ಚೆಂಡೆ ಬಾರಿಸುವ ಮೂಲಕ ಚಾಲನೆ ನೀಡಿದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಟೈಟಸ್ ವರ್ಗೀಸ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ವಂದಿಸಿದರು.ಯಕ್ಷ ಶಿಕ್ಷಣದ ಶಾಲಾ ಉಸ್ತುವಾರಿ ಶಿಕ್ಷಕ ಶ್ರೀ ಲಿಂಗಪ್ಪ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
- Thursday
- November 21st, 2024