ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ)ಸುಳ್ಯ ಕಮಿಟಿ “ಬಿ” ಇದರ ಆಡಳಿತದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ವಿ.ಜಿ.ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಭಾಗಮಂಡಲದಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮತ್ತು ಹಿರಿಯ ವಿದ್ಯಾರ್ಥಿಗೆ ಸನ್ಮಾನ ಸಮಾರಂಭವು ಜೂ .15ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ಮಾರ್ಟ್ ಕ್ಲಾಸ್‌ನ್ನು ಉದ್ಘಾಟಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯಕೇಶನ್(ರಿ) ಸುಳ್ಯ ಕಮಿಟಿ “ಬಿ”ಯ ಛೇರ್‌ಮೆನ್ ಡಾ.ರೇಣುಕಾ ಪ್ರಸಾದ್ ಕೆ.ವಿ. ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಲು ಆಧುನಿಕ ತಂತ್ರಜ್ಞಾನದ ಅಗತ್ಯವಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯನ್ನು ದೃಷ್ಠಿಯಲ್ಲಿ ಇಟ್ಟುಕೊಂಡು ಸ್ಮಾರ್ಟ್ ಕ್ಲಾಸ್‌ನ್ನು ಪ್ರಾರಂಭಿಸಲಾಗಿದೆ. ಇದರ ಸದುಪಯೋಗ ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆದುಕೊಳ್ಳಲಿ ಎಂದು ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಉಜ್ವಲ್ ಯು.ಜೆ ಮಾತಾಡಿ ಆಧುನಿಕ ತಂತ್ರಜ್ಞಾನವನ್ನು ಇಂದಿನ ವಿದ್ಯಾರ್ಥಿಗಳು ಯಾವರೀತಿ ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಬಳಸಿಕೊಳ್ಳಬಹುದು ಮತ್ತು ಅದರಿಂದಾಗುವ ಪ್ರಯೋಜನೆಗಳ ಬಗ್ಗೆ ವಿವರಿಸಿ ಸ್ಮಾಟ್ ಕ್ಲಾಸ್‌ನ ಬಳಕೆ ಮತ್ತು ಅದರಿಂದಾಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಪ್ರಸ್ತುತ ಉದ್ಯೋಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉದ್ಯೋಗಿ ಲಕ್ಷ್ಮೀಶ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕಾಂತ್ ಕುಡೆಕಲ್ಲು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕೆ.ವಿ.ಜಿ.ದಂತ ಮಹಾವಿದ್ಯಾಲಯ ಸುಳ್ಯದ ಪ್ರಾದ್ಯಾಪಕರಾದ ಡಾ|ಮನೋಜ್ ಅಡ್ಡಂತಡ್ಕ, ಕೆವಿ.ಜಿ.ಎಂಜಿನಿಯರಿoಗ್ ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಕೆ.ವಿ.ಜಿ.ಪಾಲಿಟೆಕ್ನಿಕ್ ಸಿಬ್ಬಂದಿಗಳಾದ ಶ್ರೀ ವಸಂತ ಕಿರಿಭಾಗ, ಶ್ರೀ ಪ್ರಸನ್ನ ಕಲ್ಲಾಜೆ, ಶ್ರೀ ಕಮಲಾಕ್ಷ ನಂಗಾರು ಸಹಿತ ಕೆ.ವಿ.ಜಿ.ಐ.ಟಿ.ಐ ಭಾಗಮಂಡಲದ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿನೋದ್ ಸಿ.ಕೆ ಸ್ವಾಗತಿಸಿ, ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ಪುನೀತ ಕಾರ್ಯಕ್ರಮ ನಿರೂಪಿಸಿದರು.