Ad Widget

ಮಂಡೆಕೋಲು :  ಗ್ರಾ.ಪಂ.ಗ್ರಂಥಾಲಯ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ವಿಶ್ವ ಯೋಗ ದಿನಾಚರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ

ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಂಡೆಕೋಲು ಇದರ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ವಿಪತ್ತು ನಿರ್ವಹಣಾ ವಾರ್ಷಿಕ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಆಚರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಹಾಗೂ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು,ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪೆರಾಜೆ, ಗ್ರಾಮ ಪಂಚಾಯತ್ ಸದಸ್ಯ ಅನಿಲ್ ತೋಟಪ್ಪಾಡಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮೋಹಿನಿ. ಬಿ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ವೇದಾವತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಚಂದ್ರಜಿತ್ ಮಾವಂಜಿ,ಭಾರತಿ ಉಗ್ರಾಣಿಮನೆ ಉಪಸ್ಥಿತರಿದ್ದರು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಶಾಲಾ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಯೋಗ ತರಭೇತಿ ನೀಡಿದರು. ಮಂಡೆಕೋಲು, ವಿನೋಬಾ ನಗರ ಅಡ್ಕಾರ್,ಪುತ್ಯ ಕನ್ಯಾನ,ಅಜ್ಜಾವರ ಪ್ರೌಢ ಶಾಲೆಯ ವಿದ್ಯಾರ್ಥಿಗಳು
ಆ ಬಳಿಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಶೌರ್ಯ ವಿಪತ್ತು ಘಟಕ ಆರಂಭವಾದ ಐದನೇ ವರ್ಷಾಚರಣೆಯ ಪ್ರಯುಕ್ತ ನೂತನ ಗ್ರಂಥಾಲಯ ಕಟ್ಟಡದ ಮುಂಬಾಗದಲ್ಲಿ ಹೂ ಗಿಡ ಹಾಗೂ ಆಲಂಕಾರಿಕ ಗಿಡಗಳನ್ನು ನೆಡಲಾಯಿತು. ಶೌರ್ಯ ವಿಪತ್ತು ನಿರ್ವಹಣಾ ಘಟಕವು 2020 ನೇ ಜೂನ್ 21 ರಂದು ಆರಂಭವಾಯ್ತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ಅಭಿಷೇಕ್ ಕಣೆಮರಡ್ಕ ಕಾರ್ಯಕ್ರಮ ನಿರೂಪಿಸಿದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!