Ad Widget

ನಾಳೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸುಳ್ಯಕ್ಕೆ –  ಬಿಜೆಪಿ ನೂತನ ಕಾರ್ಯಾಲಯ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿಯ ಸುಳ್ಯಮಂಡಲದ ನೂತನ ಕಾರ್ಯಾಲಯವು ಆಯುರ್ವೇದಿಕ್ ಕಾಲೇಜಿನ ಬಳಿಯ ನಿವೇಶನದಲ್ಲಿ ಜೂನ್ 24ರಂದು ಉದ್ಘಾಟನೆಗೊಳ್ಳಲಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪನವರು ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.  ಯಡಿಯೂರಪ್ಪನವರು ಜೂನ್ 23 ರಂದು ಸಂಜೆ ಧರ್ಮಸ್ಥಳಕ್ಕೆ ಆಗಮಿಸಿ ಜೂನ್ 24ರಂದು ಧರ್ಮಸ್ಥಳದ ಬೆಳಗಿನ ಪೂಜೆಯಲ್ಲಿ ಭಾಗವಹಿಸಿ ನಂತರ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನವನ್ನು ಪಡೆಯಲಿದ್ದಾರೆ. ಅಪರಾಹ್ನ ಸುಬ್ರಮಣ್ಯದಿಂದ ಹೊರಟು ಸುಳ್ಯಕ್ಕೆ ಆಗಮಿಸಿ, ಸುಳ್ಯದ ನೂತನ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಅವರ ಜೊತೆಗೆ ಬಿಜೆಪಿಯ ಜಿಲ್ಲಾಧ್ಯಕ್ಷ  ಸತೀಶ್ ಕುಂಪಲ ರವರು, ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ, ಮಾಜಿ ಸಚಿವರಾದ ಎಸ್ ಅಂಗಾರ, ಹಾಗೂ ಜಿಲ್ಲೆಯ ಶಾಸಕರುಗಳು ಭಾಗವಹಿಸಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!