Ad Widget

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ವಿತರಣೆ

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕರ್ನಾಟಕ ಸರಕಾರ ಅರಣ್ಯ ಇಲಾಖೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಜೂ.26 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯವರು ಉಚಿತವಾಗಿ ಕೊಡ ಮಾಡಿದ ವಿವಿಧ ರೀತಿಯ ಕಾಡಿನ ಹಾಗೂ  ಹಾಗೂ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳಾದ ವಿಮಲ್ ಬಾಬು “ನಾವು ಪ್ರಕೃತಿದತ್ತವಾದ ಈ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಬೆಳೆಸೋಣ ಹಾಗೂ ಪೋಷಿಸೋಣ. ಅದರಿಂದ ದೊರೆಯುವ ಶುದ್ಧ ಆಮ್ಲಜನಕವನ್ನು ನಾವು ಸೇವಿಸುದರೊಂದಿಗೆ ನಮ್ಮ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳೋಣ. ಶುದ್ಧವಾದ ಗಾಳಿಯನ್ನು ಸೇವಿಸುವುದರೊಂದಿಗೆ  ಶುದ್ಧವಾದ ನೀರನ್ನು ಕೂಡ ಸೇವಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ಪರಿಸರ ಹಾಗೂ ಖಾಲಿ ಉಳಿದಿರುವ ಸ್ಥಳದಲ್ಲಿ ಗಿಡಗಳನ್ನ ನೆಡಲು ಮುಂದಾಗೋಣ” ಎಂದು ಹೇಳಿದರು.


ಈ ಸಂದರ್ಭದಲ್ಲಿ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕರಾದ ಹಾಗೂ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷರಾದ ಚಂದ್ರಶೇಖರ ನಾಯರ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಲಿಜನ್ ನ ಅಧ್ಯಕ್ಷರಾದ ಡಾ. ರವಿ ಕಕ್ಕೆಪದವು, ರೋಟರಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಪೂರ್ವಾಧ್ಯಕ್ಷ ಗೋಪಾಲ್ ಎಣ್ಣೆಮಜಲು, ಉಪವಲಯ ಅರಣ್ಯ ಅಧಿಕಾರಿಗಳಾದ ಮನೋಜ್, ಅರಣ್ಯ ರಕ್ಷಕರಾದ ಬಸಪ್ಪ, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ ಹೆಬ್ಬಾರ್, ಶಾಲಾ ಶಿಕ್ಷಕ ವೃಂದ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

error: Content is protected !!