ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುವಿನ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗಾಂಧಿನಗರ ಕಾರ್ಯಕ್ಷೇತ್ರದ ಸದಸ್ಯರಿಗೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸುಳ್ಯ ವಲಯದ ಅಧ್ಯಕ್ಷರಾದ ಮನೋಹರರವರು ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಭವಾನಿ ಶಂಕರ ಅಡ್ತಲೆಯವರು ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ, ಮಹಿಳೆಯರ ಪಾತ್ರದ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿದರು, ಸಂರಕ್ಷಣಾ ಘಟಕದ ಮಾದಕ ವಸ್ತುಗಳಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ಮಹಿಳೆಯರ ಪಾತ್ರದ ಬಗ್ಗೆ, ಮಕ್ಕಳಿಗೆ ಆಗುವ ತೊಂದರೆಗಳ ಬಗ್ಗೆ ತಿಳಿಸಿದರು, ಅದೇ ರೀತಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಮುಖೇಣ ಬೇರೆ ಬೇರೆ ದುಶ್ಚಟಗಳಿಗೆ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಗಾಂಧೀಜಿಯ ಕನಸನ್ನು ನನಸು ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದರು, ಜನ ಜಾಗೃತಿ ವೇದಿಕೆಯ ಸುಳ್ಯ ವಲಯದ ಅಧ್ಯಕ್ಷರಾದ ವೆಂಕಪ್ಪ ಗೌಡ ರವರು ಕಾರ್ಯಕ್ರಮವನ್ನು ಉದ್ದೇಶಿಸಿ, ಮಾದಕ ವಸ್ತುಗಳಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು.
ಸುಳ್ಯ ವಲಯದ ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ ರವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು, ಸಂಘದ ಸದಸ್ಯರಾದ ಚೋಮರವರು ಎಲ್ಲರನ್ನೂ ಸ್ವಾಗತಿಸಿದರು, ಸುಳ್ಯ ವಲಯದ ಜನ ಜಾಗೃತಿ ಉಪಾಧ್ಯಕ್ಷರಾದ ವಿಶ್ವನಾಥ ಶೆಟ್ಟಿಯವರು ಎಲ್ಲರಿಗೂ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಶ್ರೀಮತಿ ಸೌಜನ್ಯ, ಗಾಂಧಿನಗರ ಒಕ್ಕೂಟದ ಪದಾಧಿಕಾರಿಗಳಾದ ದೀಪಿಕಾ, ನಾರಾಯಣ ಜಿ.ಎನ್., ನಾಗಪಟ್ಟಣ ಒಕ್ಕೂಟದ ಅಧ್ಯಕ್ಷರು ವಿಜಯಕುಮಾರಿ, ಪದಾಧಿಕಾರಿಗಳಾದ ಮೋಹನ್ ರೈ, ರಶ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಾಂಧಿನಗರ ಒಕ್ಕೂಟದ ಮತ್ತು ನಾಗಪಟ್ಟಣ ಒಕ್ಕೂಟದ ಎಲ್ಲಾ ಸಂಘದ ಪ್ರಬಂಧಕ, ಸಂಯೋಜಕ, ಕೋಶಾಧಿಕಾರಿ, ಸರ್ವ ಸದಸ್ಯರು ಭಾಗವಹಿಸಿದ್ದರು.