ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹಾಗೂ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಜು.09 ರಂದು ಮಂಗಳವಾರ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಮತ್ತು ವಿದ್ಯುತ್ ಮಾರ್ಗಕ್ಕೆ ತಾಗಿಕೊಂಡಿರುವ ಅಪಾಯಕಾರಿ ಸ್ವಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಇರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಮತ್ತು 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಾದ ಬೆಳ್ಳಾರೆ-1. ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ,ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದೆ.
- Monday
- November 25th, 2024