ಯಾತ್ರಾರ್ಥಿಗಳಿಗೆ ತೀರ್ಥಸ್ನಾನ ನೆರವೇರಿಸಲು ಪರ್ಯಾಯ ವ್ಯವಸ್ಥೆ
ಇಂದು(ಜು.15) ಮುಂಜಾನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನಘಟ್ಟ ಮುಳುಗಡೆಯಾಗಿದೆ ಎಂದು ತಿಳಿದುಬಂದಿದೆ.
ಯಾತ್ರಾರ್ಥಿಗಳಿಗೆ ತೀರ್ಥಸ್ನಾನ ನೆರವೇರಿಸಲು ನದಿ ನೀರನ್ನು ಡ್ರಮ್ ಮೂಲಕ ಸಂಗ್ರಹಿಸಿ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಭಕ್ತಾದಿಗಳು ನದಿಪಾತ್ರಕ್ಕೆ ತೆರಳದಂತೆ ಕ್ಷೇತ್ರದ ವತಿಯಿಂದ ಸೂಚನೆ ನೀಡಲಾಗಿದ್ದು, ಸ್ನಾನಘಟ್ಟದ ಬಳಿ ಹೋಮ್ ಗಾರ್ಡ್ ಹಾಗೂ ದೇವಸ್ಥಾನದ ಸೆಕ್ಯೂರಿಟಿಗಳನ್ನು ನೇಮಿಸಿ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.(ವರದಿ : ಉಲ್ಲಾಸ್ ಕಜ್ಜೋಡಿ)