ಸುಳ್ಯದ ನಾವೂರಿನಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಬಳಿ ಕಸ ಹಾಗೂ ಒಡೆದ ಬಾಟಲಿಗಳನ್ನು ಎಸೆದಿದ್ದು, ಮೆಸ್ಕಾಂ ಸಿಬ್ಬಂದಿಗಳು ಕೆಲಸ ನಿರ್ವಹಿಸಲು ತೊಂದರೆ ಅನುಭವಿಸುವಂತಾಗಿದೆ.
ವಿದ್ಯುತ್ ಸಮಸ್ಯೆಯಾದಾಗ ಮಳೆಯನ್ನು ಲೆಕ್ಕಿಸದೇ ಮೆಸ್ಕಾಂ ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೇ ಪವರ್ ಮ್ಯಾನ್ ಗಳಿಗೆ ಕರ್ತವ್ಯ ನಿರ್ವಹಿಸುವ ವೇಳೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಅದರ ಬಗ್ಗೆ ಯಾರು ಗಮನ ಹರಿಸುತ್ತಿಲ್ಲ. ಹಲವಾರು ಟ್ರಾನ್ಸ್ ಫಾರ್ಮರ್ ಬಳಿಯೇ ಕಸ, ಬಾಟಲಿ ಎಸೆಯುತ್ತಿರುವುದು ಕಂಡುಬಂದಿದೆ. ರಾತ್ರಿ ವೇಳೆ ಫ್ಯೂಸ್ ಹಾಕಲು ಹೋಗುವವರಿಗೆ ಗಾಯಗಳಾಗುವ ಸಾಧ್ಯತೆ ಇದೆ. ಈ ಬಗ್ಗೆ ನಾಗರಿಕರು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಬೆಳಕು ನೀಡುವ ಕಾರ್ಮಿಕರ ಬಗ್ಗೆ ಗಮನ ಹರಿಸಬೇಕಿದೆ.