ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮಳೆ ಪ್ರಮಾಣ ಹೆಚ್ಚಾಗಲಿದ್ದು ಈ ಹಿನ್ನಲೆಯಲ್ಲಿ ಕೆಲ ದಿನಗಳಿಂದ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿದ್ದರು. ಅದರೇ ಜು.18 ರಂದು ರಜೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡಿಸುತ್ತಿದ್ದು ಇದು ನಕಲಿ ಆದೇಶವಾಗಿದೆ. ಅಲ್ಲದೇ ಭಾರೀ ಮಳೆಯ ಸೂಕ್ಷ್ಮ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವುದು ಮತ್ತು ಮಕ್ಕಳು ಮತ್ತು ಪೋಷಕರನ್ನು ದಾರಿ ತಪ್ಪಿಸುವುದು ಕಾನೂನುಬಾಹಿರವಾಗಿದೆ. ಈ ಕೃತ್ಯ ಎಸಗಿರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ವಿಭಾಗಿಯ ಅಧಿಕಾರಿ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ.
- Wednesday
- April 2nd, 2025