Ad Widget

ಕಲ್ಮಡ್ಕ : ಗ್ರಾಮ ಪಂಚಾಯತ್ ಅಧ್ಯಕ್ಷರ ಮನವಿಗೆ ಸ್ಪಂದಿಸಿ ರೂ. 20 ಲಕ್ಷ ಅನುದಾನ ಬಿಡುಗಡೆಗೆ ಶಿಫಾರಸ್ಸು ಮಾಡಿದ ಸ್ಪೀಕರ್ ಯು.ಟಿ. ಖಾದರ್

(ವರದಿ :ಭಾಸ್ಕರ ಗೌಡ ಜೋಗಿಬೆಟ್ಟು)

ವಿಪರೀತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಎಡೆ ಬಿಡದೆ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಕಲ್ಮಡ್ಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೋಡೆ ಬಿರುಕು ಬಿಟ್ಟಿದೆ. ಶಾಲೆಗೆ ಸರಿಸುಮಾರು ನೂರು ವರ್ಷಗಳು ಸಂದಿವೆ. ಈ ಶಾಲೆಯು ಬಹಳ ಹಳೆಯದ್ದಾಗಿದ್ದು , ಸುಮಾರು ನೂರರಷ್ಟು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಸರಿಯಾದ ಪರ್ಯಾಯ ವ್ಯವಸ್ಥೆ ಇಲ್ಲವಾದ್ದರಿಂದ ತಕ್ಷಣ ಕಾರ್ಯಪ್ರವೃತ್ತರಾದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಹೇಶ್ ಭಟ್ ಕರಿಕ್ಕಳ ಅವರು ,ಸ್ಪೀಕರ್ ಗಮನಕ್ಕೆ ತಂದಿದ್ದರು. ತಕ್ಷಣ ಸ್ಪಂದಿಸಿದ ಯು.ಟಿ.ಖಾದರ್ ಅವರು ಅನುದಾನ ಬಿಡುಗಡೆ ಮಾಡಲು ಸಹಕರಿಸಿದ್ದಾರೆ. ಈ ಕಾರ್ಯಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!