Ad Widget

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ “ಮಿನಿ ಪಾಜೆಕ್ಟ್ ಎಕ್ಸ್ ಪೋ–2024”



ರಾಷ್ಟ್ರೀಯ ಶಿಕ್ಷಣ ನೀತಿ (NEP) ಒಂದು ದೇಶದ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಸಾರ್ವತ್ರಿಕವಾಗಿ ಹರಡುವ ನೀತಿ ಕಾರ್ಯಕ್ರಮ
– ಡಾ. ಉಜ್ವಲ್ ಯು.ಜೆ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಗಳಿಂದ ೨೦೨೪ನೇ
ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, “ಮಿನಿ
ಪ್ರಾಜೆಕ್ಟ್ ಎಕ್ಸ್ಪೋ–೨೦೨೪” ಜುಂ. ೨೩ರಂದು ನಡೆಯಿತು.
ಪ್ರದರ್ಶನದ ಉದ್ಘಾಟನೆಯನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್
ಯು.ಜೆ.ಯವರು ಉದ್ಘಾಟಿಸಿ ರಾಷ್ಟ್ರೀಯ ಶಿಕ್ಷಣ ನೀತಿ ಒಂದು ದೇಶದ
ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಸಾರ್ವತ್ರಿಕವಾಗಿ ಹರಡುವ ನೀತಿ ಕಾರ್ಯಕ್ರಮ, ಇದಕ್ಕೆ ಈ ಮಿನಿ ಪ್ರಾಜೆಕ್ಟ್ ಎಕ್ಸ್ಪೋ ಪೂರಕವಾಗಿದೆ ಎಂದು
ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವಿವಿಧ ಇಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳಿಂದ ಉತ್ತಮ ಪ್ರಾಜೆಕ್ಟ್ಗಳು
ಪ್ರದರ್ಶಿತಗೊಂಡಿದ್ದು, ವಿದ್ಯಾರ್ಥಿಗಳ ಆಸಕ್ತಿ, ಶ್ರಮ ಮತ್ತು ಸೃಜನಶೀಲತೆಗೆ ಮತ್ತು ಬೋಧಕ ವೃಂದದಿಂದ ನೀಡಲ್ಪಟ್ಟ ಸೂಕ್ತ
ಮಾರ್ಗದರ್ಶನಕ್ಕೆ ಪ್ರಾಂಶುಪಾಲರು ಮೆಚ್ಚುಗೆ ವ್ಯಕ್ತಪಡಿಸಿ ಸಾಂದರ್ಭಿಕ
ಮಾತುಗಳನ್ನಾಡಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರು ಹಾಗೂ ಕಾರ್ಯಕ್ರಮ ಸಂಯೋಜಕರು ಪ್ರೊ. ರಾಘವೇಂದ್ರ ಆರ್. ಕಾಮತ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮ ನಿರೂಪಣೆಯನ್ನು
ವಿದ್ಯಾರ್ಥಿಗಳಾದ ಕು. ದೇಚಮ್ಮ ಮತ್ತು ಶ್ರೀ ರಕ್ಷಿತ್ ನಡೆಸಿಕೊಟ್ಟರು. ಮಿನಿ ಪ್ರಾಜೆಕ್ಟ್ ಎಕ್ಸ್ಪೋ-೨೦೨೪ ಪ್ರಾಜೆಕ್ಟ್ ವೀಕ್ಷಣೆಗೆ ಕೆ.ವಿ.ಜಿ. ಅಮರಜ್ಯೋತಿ
ಪಿ.ಯು. ಕಾಲೇಜು ಮತ್ತು ಕೆ.ವಿ.ಜಿ. ಪಾಲಿಟೆಕ್ನಿಕ್ ಮತ್ತು ಕೆ.ವಿ.ಜಿ. ಐ.ಪಿ.ಎಸ್.ನಿಂದ
ಹಲವಾರು ವಿದ್ಯಾರ್ಥಿಗಳು ಆಗಮಿಸಿದರು. ಕಾಲೇಜಿನ ಎಲ್ಲಾ ಇಂಜಿನಿಯರಿಂಗ್
ವಿಭಾಗಗಳಿಂದ ಪ್ರಾಜೆಕ್ಟ್ಗಳು ಪ್ರದರ್ಶಿತಗೊಂಡವು. ಇದೇ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರು ಮತ್ತು ಗಣಿತ ವಿಭಾಗದ ಮುಖ್ಯಸ್ಥರು ಡಾ. ಶ್ರೀಧರ್ ಕೆ., ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ

ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ
ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ. ಲೋಕೇಶ್ ಪಿ.ಸಿ, ಕಾಲೇಜಿನ ಆಡಳಿತಾಧಿಕಾರಿ, ಶ್ರೀ ನಾಗೇಶ್ ಕೊಚ್ಚಿ, ಎಲ್ಲಾ
ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!