Ad Widget

ಅಪಾಯಕಾರಿ ಮರ ತೆರವು ಹಿನ್ನೆಲೆ ಸುಳ್ಯದಲ್ಲಿ (ಜು.24)ನಾಳೆ ವಿದ್ಯುತ್ ವ್ಯತ್ಯಯ

ಸುಳ್ಯಕ್ಕೆ 33ಕೆ.ವಿ. ವಿದ್ಯುತ್ ಲೈನ್ ಹಾದು ಬರುವ ಕನಕಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತುರ್ತಾಗಿ ತೆರವುಗೊಳಿಸುವ ಹಿನ್ನೆಲೆಯಲ್ಲಿ ಜು. 24 ಬುಧವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್ ಗಳಾದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!