ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷರಾದ ಭರತ್ ಮುಂಡೋಡಿ ರವರ ಕಚೇರಿ ಉದ್ಘಾಟನಾ ಕಾರ್ಯಕ್ರಮ ಇಂದು ನೆರವೇರಿತು.
ಗುತ್ತಿಗಾರಿನ ಲೀಲಾವತಿ ಅಪ್ಪಯ್ಯ ಆಚಾರ್ಯ ರವರು ಕಛೇರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು,ಮಾಜಿ ಶಾಸಕರಾದ ಹರೀಶ್ ಕುಮಾರ್ ರವರು ದೀಪ ಪ್ರಜ್ವಲನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜೆ ಅರ್ ಲೋಬೊ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಮುಖಂಡರುಗಳಾದ ನಿತ್ಯಾನಂದ ಮುಂಡೋಡಿ, ಧನಂಜಯ ಅಡ್ಪಂಗಾಯ, ಟಿ. ಎಂ ಶಾಹೀದ್, ಸದಾನಂದ ಮಾವಜಿ, ಪಿ.ಎಸ್. ಗಂಗಾಧರ, ಸೇರಿದಂದೆ ಕುಟುಂಬಸ್ಥರು ಉಪಸ್ಥಿತರಿದ್ದರು