Ad Widget

ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯು ಆ.15ರಂದು ನಡೆಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಎಸ್ ಅಂಗಾರರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಪೂರ್ವದ ನೆನಪುಗಳು, ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ತಿಳಿಸಿದರು. ಇವುಗಳನ್ನು ತಿಳಿದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಶಾಲೆಯ ಸಂಚಾಲಕ ಶ್ರೀ ರಾಧಾಕೃಷ್ಣ ಬೊಳ್ಳೂರು, ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ್ರೀ ತೇಜಸ್ವಿ ಕಡಪಳ, ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀ ಸತ್ಯಪ್ರಸಾದ್ ಪುಳಿಮಾರಡ್ಕ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ವಿಶ್ವನಾಥ ಮೂಕಮಲೆ, ಗ್ರಾಮ ಪಂಚಾಯಿತಿಯ ಸದಸ್ಯರಾದ ಶ್ರೀ ಕೃಷ್ಣಪ್ರಸಾದ್ ಮಾಡಬಾಕಿಲು, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ, ಚೊಕ್ಕಾಡಿ ಆಂ.ಮಾ.ಶಾಲೆ ಮುಖ್ಯೋಪಾಧ್ಯಾಯರಾದ
ಪ್ರತಿಭಾ ಎಸ್. ಆಳ್ವ, ವಿದ್ಯಾಸಂಸ್ಥೆಯ ಶಿಕ್ಷಕರು, ಸಿಬ್ಬಂದಿವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!