Ad Widget

ಹರಿಹರ ಪಲ್ಲತ್ತಡ್ಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದ್ವಜಾರೋಹಣವನ್ನು ನೆರವೇರಿಸಿದರು.
ನಂತರ ಶಾಲಾ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾರಾ ಮಲ್ಲಾರ ಅವರು ಉಪಸ್ಥಿತರಿದ್ದರು.
ಮಕ್ಕಳಿಗೆ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶಾಲೆಯ ವತಿಯಿಂದ ಸಿಹಿತಿಂಡಿಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!