Ad Widget

ಆ.26: ದೇವದಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ – ಮೊಸರು ಕುಡಿಕೆ ಹಾಗೂ ಜಾರುಕಂಬ ಸ್ಪರ್ಧೆ

ದೇವ ಗೆಳೆಯರ ಬಳಗ ಹಾಗೂ ಜ್ಯೋತಿಲಕ್ಷ್ಮಿ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ಆ.26 ರಂದು ದೇವದಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ 34ನೇ ವರ್ಷದ ಮೊಸರು ಕುಡಿಕೆ ಮತ್ತು ಜಾರು ಕಂಬ ಹಾಗೂ ಇನ್ನಿತರ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

. . . . . . . . .

ಕಾರ್ಯಕ್ರಮದ ಉದ್ಘಾಟನೆಯನ್ನು ಊರಿನ ಹಿರಿಯರಾದ ಚಿನ್ನಪ್ಪ ಗೌಡ ದೇವ ನೆರವೇರಿಸಲಿದ್ದಾರೆ. ಪೂ.11.30 ಕ್ಕೆ ಸಂಪಾಜೆ ಹೊರಠಾಣೆಯ ಸಹಾಯಕ ಉಪನಿರೀಕ್ಷಕರಾದ ಸುಂದರ ಸುವರ್ಣ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

. . . . . . .

ಸಂಜೆ ನಡೆಯುವ ಸಮಾರೋಪ ಹಾಗೂ ಸನ್ಮಾನ ಸಮಾರಂಭದ ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಅಧ್ಯಕ್ಷ ಮುಕುಂದ ಹಿರಿಯಡ್ಕ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ
ದೇವ ಕಿ.ಪ್ರಾ.ಶಾಲಾ ಶಿಕ್ಷಕ ಜಯಪ್ರಕಾಶ್ ಮುತ್ಲಾಜೆ ಹಾಗೂ ಮೆಸ್ಕಾಂ ಸಿಬ್ಬಂದಿ ಸುಧಾಕರ ಪಂಜಿಪಳ್ಳ ಅವರಿಗೆ ಸನ್ಮಾನ ನೆರವೇರಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಉಪಾಧ್ಯಕ್ಷೆ ಲೀಲಾವತಿ ಸೇವಾಜೆ, ಗುತ್ತಿಗಾರು ಗ್ರಾ.ಪಂ.ಸದಸ್ಯೆ ವಿಜಯಕುಮಾರ್ ಚಾರ್ಮತ, ನಿವೃತ್ತ ಶಿಕ್ಷಕ ಕುಶಾಲಪ್ಪ ಮಾಸ್ತರ್ ರುದ್ರಚಾಮುಂಡಿ ನಿಲಯ” ಕಂದ್ರಪ್ಪಾಡಿ, ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಮಾವಿನಕಟ್ಟೆ, ಪತ್ರಕರ್ತ ಮುರಳೀಧರ ಅಡ್ಡನಪಾರೆ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ., ಮಾನ್ಯ ಡೆವಲಪರ್ಸ್ ನ ಯತೀಶ್ ಗಟ್ಟಿಗಾರು ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಗೆಳೆಯರ ಬಳಗದ ಕಾರ್ಯದರ್ಶಿ ಜಯಂತ್ ದೇವ, ಜ್ಯೋತಿಲಕ್ಷ್ಮೀ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಕಲಾ ಪದ್ಮನಾಭ ದೇವ, ಕಾರ್ಯದರ್ಶಿ ಶ್ರೀಮತಿ ಉಷಾ ಸತೀಶ್ ಕನ್ನಡಕಜೆ ಉಪಸ್ಥಿತರಿರಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading