ಆ 26: ವಿಕಾಸ ಸೌಧದಲ್ಲಿ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಮಂಡಳಿ ಹಾಗೂ ಖಾಸಗಿ ಕಂಪನಿ ಮತ್ತು ಕೈಗಾರಿಕೆಗಳ ಸಹಭಾಗಿತ್ವದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತೀಕರಿಸಿದ ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ಮಾನ್ಯ ಸಚಿವರು ಈ ಸಭೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉದ್ಯೋಗ ದೊರಕಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ಮತ್ತು ಚರ್ಚೆ ನಡೆಸಿದರು. ಮುಂದುವರಿದು ಇದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿ ಮತ್ತೆ ಈ ಬಗ್ಗೆ ಸಭೆ ಸೇರಿ ತೀರ್ಮಾನ ಮಾಡುವುದು ಎಂದು ನಿರ್ಧರಿಸಲಾಯಿತು. ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರಾದ ಶ್ರೀ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಭಾರತಿ , ಮಂಡಳಿಯ ನೂತನ ಸದಸ್ಯರುಗಳಾದ ಜಾನಿ.ಕೆಪಿ,ಹೆಚ್ .ಜಿ. ರಮೇಶ್ ,ಕವಿತಾ ರೆಡ್ಡಿ ,ಬಸಪ್ಪ , ಹಾಗೂ ಮಾಲೀಕರ ಪ್ರತಿನಿಧಿಗಳಾದ, ಶ್ರೀಯಾನ್ , ವಿಜಯಕುಮಾರ್ ಮತ್ತು ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಕಾರ್ಖಾನೆಗಳ ಆಡಳಿತ ಮಂಡಳಿ ಪ್ರಮುಖರು ಪಾಲ್ಗೊಂಡಿದ್ದರು.