Ad Widget

ಮುಂಗಾರು ಹಂಗಾಮಿ ಬೆಳೆಸಮೀಕ್ಷೆ ತಮ್ಮ ಬೆಳೆಗಳ ನಿಖರವಾದ ದಾಖಲಾತಿಗೆ ರೈತರಿಗೆ ಅವಕಾಶ

ಬೆಳೆ ದಾಖಲಾತಿ ಮಾಡುವ ವಿಧಾನ ಹೇಗೆ ಮತ್ತು ಯಾವ ಕ್ಯೂಆರ್ ಕೋಡ್ ಬಳಸಬೇಕು ಹಾಗಿದ್ದರೆ ಸಂಪೂರ್ಣ ಮಾಹಿತಿ ಇಲ್ಲಿದೆ. ಸುಳ್ಯ:2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ರೈತರು ತಮ್ಮ ಆಂಡೋಯ್ಡ್ ಮೊಬೈಲಿನ ಮೂಲಕ ತಮ್ಮ ಜಮೀನಿನಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಸುಳ್ಯ ಸಹಾಯಕ ಕೃಷಿ ನಿರ್ದೇಶಕರಾದ ಗುರುಪ್ರಸಾದ್ ಎಂ ಎಸ್ ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ ರೈತರು ಯಾವ ರೀತಿಯಲ್ಲಿ ಬೆಳೆಯನ್ನು ನಮೂದಿಸುವುದು ಎಂಬುದರ ಮಾಹಿತಿ ಇಲ್ಲಿದೆ .ರೈತರು Google Play Store ನಿಂದ ಅಥಾವ ಮಾಧ್ಯಮ ಪ್ರಕಟಣೆಯಲ್ಲಿ ಇರುವ ಕ್ಯೂಆರ್ ಕೋಡ್ ಬಳಸಿ https://play.google.com/store/apps/details?id=com.csk.Khariffarmer23 24.crop survey QR code w๙ Kharif Season Farmer Crop Survey 2024-25 ಆ್ಯಪ್‌ನ್ನು ಡೌನ್‌ಲೋಡ್ ಮಾಡಿ ಪಹಣಿ ಪತ್ರದಲ್ಲಿ ಹೆಸರಿರುವ ರೈತರ ಆಧಾರ್‌ನಲ್ಲಿರುವಂತೆ ಮಾಹಿತಿಯನ್ನು ದಾಖಲಿಸಿದಾಗ, ಆಧಾರ್ ಗೆ ಜೋಡಣೆಯಾದ ಮೊಬೈಲ್ ಸಂಖ್ಯೆಗೆ ಬಂದ OTP ಯನ್ನು ದಾಖಲಿಸಿ ತದನಂತರ ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ OTP ಬರಲಿದೆ. OTP ಯನ್ನು ದಾಖಲಿಸುವುದು. ಆಗ ರೈತ ನೋಂದಾಣಿ ಸಂಖ್ಯೆ(ಎಪ್.ಐ.ಡಿ)ಯಲ್ಲಿರುವಂತೆ ಸರ್ವೆ ನಂಬರ್ ಬರಲಿದ್ದು ಸರ್ವೆನಂಬರ್‌ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್ ಲೋಡ್ ಮಾಡುವುದು. ರೈತ ನೋಂದಾಣಿ ಸಂಖ್ಯೆಯನ್ನು ಪಡೆಯಲು ಆಧಾರ್, ಆರ್.ಟಿ.ಸಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು ಸಮೀಪದ ರೈತ ಸಂಪರ್ಕ ಕೇಂದ್ರ ತೋಟಗಾರಿಕೆ ಇಲಾಖೆ, ಹತ್ತಿರದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸುವುದು.ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಾಕೃತಿಕ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ ತೋಟಗಾರಿಕೆ/ ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಸುವರ್ಣಾವಕಾಶವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವುದು. ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್ ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು-2024 ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ಸುಳ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading