Ad Widget

ಅರಂತೋಡು: ಸಮಗ್ರ ಬೆಳೆ ನಿರ್ವಹಣೆ ಕುರಿತ ಮಾಹಿತಿ- ಮಂಥನ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

ಅರಂತೋಡು -ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗ್ರಾಮ ಪಂಚಾಯತ್ ಅರಂತೋಡು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಇನ್ನರ್ ವೀಲ್ ಕ್ಲಬ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಕೃಷಿಯ ಸಮಗ್ರ ಬೆಳೆ ನಿರ್ವಹಣೆಯ ಕುರಿತು ಮಾಹಿತಿ – ಮಂಥನ ಕಾರ್ಯಕ್ರಮ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ ಆಗಸ್ಟ್ ೨೯ ರಂದು ಅರಂತೋಡು ಸಹಕಾರಿ ಸಂಘದ “ಸಿರಿ ಸೌಧ ” ಸಭಾಂಗಣದಲ್ಲಿ ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರು ನೆರವೇರಿಸಿದರು.

. . . . .

ಅರಂತೋಡು ಸಹಕಾರಿ ಸಂಘದ ಉಪಾಧ್ಯಕ್ಷರಾದ ದಯಾನಂದ ಕುರುಂಜಿ, ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಭವಾನಿ ಚಿಟ್ಟನ್ನೂರು, ಇಂದೋರ್ ನ ಶ್ರೀ ಸಿದ್ದಿ ಎಗ್ರಿ ಕಂ ಪ್ರೈವೇಟ್ ಲಿಮಿಟೆಡ್ ನ ಪೆರುವೋಡಿ ನಾರಾಯಣ ಭಟ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಚಿಂತನಾ ಸುಬ್ರಹ್ಮಣ್ಯ, ಪ್ರಗತಿಪರ ಕೃಷಿಕರಾದ ಶ್ರೀನಿವಾಸ ನಿಡಿಂಜಿ, ಜೇಡ್ಲ ಶ್ರೀಧರ ಭಟ್, ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಯೋಗಿತಾ ಗೋಪಿನಾಥ್ ಮತ್ತು ಪ್ರಸಾದ್ ನೇತ್ರಾಲಯದ ವೈದ್ಯರಾದ ಡಾ ಟ ಅಹನಾ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.
ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ಸ್ವಾಗತಿಸಿ, ನಯನಕುಮಾರ್ ಕಿರ್ಲಾಯ ವಂದಿಸಿದರು.ಅರAತೋಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಮ್.ಆರ್. ಕಾರ್ಯಕ್ರಮ ನಿರ್ವಹಿಸಿದರು. ಸಹಕಾರಿ ಸಂಘದ ನಿರ್ದೇಶಕರುಗಳು, ಪಂಚಾಯತ್ ಸದಸ್ಯರುಗಳು, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಸದಸ್ಯರು ಮತ್ತು ಪದಾಧಿಕಾರಿಗಳು, ಅರಂತೋಡು -ತೊಡಿಕಾನ ಅವಳಿ ಗ್ರಾಮಗಳ ಗ್ರಾಮಸ್ಥರಲ್ಲದೆ ನೆರೆಯ ಗ್ರಾಮಗಳ ಸಾರ್ವಜನಿಕರು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದ ನಂತರ ಸಹಕಾರಿ ಸಂಘದ ಸಭಾಂಗಣದಲ್ಲಿ ಕೃಷಿಯ ಮಾಹಿತಿ ಕಾರ್ಯಕ್ರಮ ಮತ್ತು ಪಂಚಾಯತ್ ಸಭಾಂಗಣದಲ್ಲಿ ನೇತ್ರ ತಪಾಸಣಾ ಶಿಬಿರ ನಡೆಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!