
ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರು
ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್‌ನ ಪದ್ಮನಾಭ ಅತ್ಯಾಡಿ
ಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ
2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸುಳ್ಯ ಗಾಂಧಿನಗರ ಕೆಪಿಎಸ್ ನ ಮುಖ್ಯ ಶಿಕ್ಷಕ ಪದ್ಮನಾಭ ಅತ್ಯಾಡಿ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಅಜ್ಜಾವರ ಗ್ರಾಮದ ದೊಡ್ಡೇರಿ ಪ್ರಾಥಮಿಕ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ ಪ್ರಕಟವಾಗಿದೆ.
ಸೆ.5ರಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಈ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ತಿಳಿದು ಬಂದಿದೆ.