

ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಇವುಗಳ ವತಿಯಿಂದ ಇಂದು ಐದು ಹಿರಿಯ ನಿವೃತ್ತ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು.


ವಿದ್ವಾನ್ ಕೇಶವ ಭಟ್, ರಾಮ ಶರ್ಮಾ, ದೊಡ್ಡಣ್ಣ ಗೌಡ, ಪುಂಗವ ಗೌಡ ಹಾಗೂ ಸುಬ್ರಾಯ ಗೌಡ ಇವರುಗಳನ್ನು ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.