Ad Widget

ಸುಳ್ಯ ಎನ್ನೆoಪಿಯುಸಿಯಲ್ಲಿ  ಶಿಕ್ಷಕರ ದಿನಾಚರಣೆ.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಈ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದವರು.ನಾವು ನಮ್ಮ ಬದುಕಿಗೆ ದಾರಿ ತೋರಿದ ಎಲ್ಲಾ ಶಿಕ್ಷಕರನ್ನು ನೆನಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರಿಲ್ಲ. ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಲ್ಲ ಎಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಾoಶುಪಾಲರಾದ ಮಿಥಾಲಿ ಪಿ ರೈ  ಹೇಳಿದರು. ಅವರು ಸಂಸ್ಥೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅಪರಾಹ್ನ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಅವರು ಆಗಮಿಸಿ ಮಾತನಾಡಿ ಶಿಕ್ಷಕರ ಸ್ಥಾನಕ್ಕೆ ಬಹಳ ಗೌರವ ಇದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು ಎಂದು ಶಿಕ್ಷಕರ ದಿನಾಚರಣೆಯ ಸಂದೇಶ ತಿಳಿಸಿದರು.ಹಾಗೂ ಬೋಧಕ ಬೋಧಕೇತರ ವೃಂದದವರಿಗೆ ಪೆನ್ನು, ಪುಸ್ತಕ ಉಡುಗೊರೆ ನೀಡಿದರು.ಪೂರ್ವಾಹ್ನ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಾಚಾರ್ಯರಾದ ಮಿಥಾಲಿ ಪಿ ರೈ,ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ,ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಆರಂಭದಲ್ಲಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರ ಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.  ಉಪನ್ಯಾಸಕರಿಗಾಗಿ  ವಿವಿಧ ಮೋಜಿನ ಆಟ, ಮನರಂಜನೆಯ ಸ್ಪರ್ಧೆಯನ್ನು ಶ್ರೇಯ ಎಂ,ಸುಮಂತ್ ಎಂ ಆರ್ ನಡೆಸಿಕೊಟ್ಟರು.ವಿದ್ಯಾರ್ಥಿನಿಯರಾದ   ಅಮೃತ ಮತ್ತು ಬಳಗ ಪ್ರಾರ್ಥಿಸಿ, ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ರಿಯಾ ಕೆಜೆ ಸ್ವಾಗತಿಸಿದರು ,ನಿಖಿತಾ ಹೆಬ್ಬಾರ್ ಮತ್ತು ಬಳಗ  ಸಮೂಹ ಗೀತೆ ಸಾದರಪಡಿಸಿದರು. ಅನಘ ಅಜಿಶ್ ವಂದಿಸಿದರು.ಆಯಿಷಾ ಅಸ್ನ ನಿರೂಪಿಸಿದರು. ವಿದ್ಯಾರ್ಥಿ ಸಂಘದ ನಾಯಕರಾದ ಸುಶಾಂತ್, ಗಾಯತ್ರಿ ಹಾಗೂ ಕಾಲೇಜಿನ ಹಲವು ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಸಹಕರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!