ಅಜ್ಜಾವರ : ಶತಮಾನೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಅಜ್ಜಾವರ ಶಾಲೆಯ ನೂತನ ವಿವೇಕ್ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪುಷ್ಪಲತ ಕರ್ಲಪ್ಪಾಡಿ ಅಧ್ಯಕ್ಷತೆಯಲ್ಲಿ ಸೆ 12 ರಂದು ನಡೆಯಿತು.
ನೂತನವಾಗಿ ನಿರ್ಮಿಸಿದ ವಿವೇಕ್ ಶಾಲಾ ಕೊಠಡಿಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಾಲೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಸರಕಾರದ ಗಮನಕ್ಕೆ ತಂದಿದ್ದು ಅನುದಾನ ಬಿಡುಗಡೆ ಆಗಬೇಕಿದೆ. ಅದಕ್ಕೆ ಬೇಕಾಗುವ ಎಲ್ಲಾ ಕೆಲಸ ಕಾರ್ಯಗಳನ್ನು ಓರ್ವ ಶಾಸಕಿಯಾಗಿ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯರು ,ಗ್ರಾ.ಪಂ ಸದಸ್ಯರುಗಳು , ಶತಮಾನೋತ್ಸವ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಸೇರಿದಂತೆ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.