ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಅಂಚೆ ವಿಮೆ ನೋಂದಣಿ, ಆರೋಗ್ಯ ಕಾರ್ಡ್ ವಿತರಣೆ ಹಾಗೂ ಮಾಹಿತಿ ಕಾರ್ಯಗಾರ ಸೆ. 13 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಉದ್ಘಾಟನೆಗೊಂಡಿತು. ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸುಳ್ಯ ತಾಲೂಕಿನ ಅತೀ ಕುಗ್ರಾಮವಾಗಿದ್ದ ಮಡಪ್ಪಾಡಿ ಮತ್ತು ಕೊಲ್ಲಮೊಗ್ರ ಗ್ರಾಮಗಳಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಇಡೀ ಸರಕಾರದ ಸಚಿವರುಗಳಾದಿಯಾಗಿ ಆಗಮಿಸಿ ಇಡೀ ಊರಿನ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡಿದ್ದು ಬಹಳ ಸಂತೋಷದ ವಿಚಾರವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆಲಂಪಾಡಿ ವಹಿಸಿದ್ದರು.
ಅಂಚೆ ಪಾಲಕರಾದ ಮೋಹನ ಎಂ.ಕೆ. ಅಂಚೆ ಇಲಾಖೆಯ ವಿಮೆ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಕಾರ್ಡ್ ವಿತರಣೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಸಂಘದ ಉಪಾಧ್ಯಕ್ಷ ಬಾಸ್ಕರ ರೈ ಕಟ್ಟ, ಜಿಲ್ಲಾ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಉಪಸ್ಥಿತರಿದ್ದರು.
ಗಂಗಾಧರ ಕಲ್ಲಪ್ಪಳ್ಳಿ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ವಂದಿಸಿದರು.