ಸುಬ್ರಹ್ಮಣ್ಯ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಗೆ ಪೂರಕ.ಆದರೆ ಇವುಗಳನ್ನು ಮರೆತು ಇದೀಗ ಮೊಬೈಲ್ ವ್ಯಾಮೋಹವನ್ನು ಬೆಳೆಸಿಕೊಂಡಿರುವುದು ಬೇಸರದ ಸಂಗತಿ. ಆದುದರಿಂದ ಮೊಬೈಲ್ ಬಿಟ್ಟು ಪುಸ್ತಕ ಓದುವತ್ತ ಗಮನ ಹರಿಸುವುದು ಸೂಕ್ತ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಹೇಳಿದರು.
ಅವರು ಎಸ್ ಎಸ್ ಪಿಯು ಕಾಲೇಜಿನಲ್ಲಿ ಸೆ.17 ರಂದು ನಡೆದ ನಡೆದ ಜಿಲ್ಲಾ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕ್ರೀಡಾ ಕ್ಷೇತ್ರವು ಇದೀಗ ಅತ್ಯಂತ ಶ್ರೇಷ್ಠ ಸ್ಥಾನವನ್ನು ಗಳಿಸಿದೆ.ಕ್ರೀಡಾಸ್ಪೂರ್ತಿಯಿಂದ ಪಂದ್ಯಾಟದಲ್ಲಿ ಭಾಗವಹಿಸಿ ಶ್ರೇಷ್ಠತೆ ಸಂಪಾದಿಸಿ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ಸೋಮಶೇಖರ್ ನಾಯಕ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವೆಂಕಟೇಶ್ ಎಚ್.ಎಲ್ , ವಿದ್ಯಾಲಯಗಳ ನಿರ್ವಾಹಕ ಮತ್ತು ಕುಕ್ಕೆ ದೇವಳದ ಸಿಬ್ಬಂದಿ ಶಿವಸುಬ್ರಹ್ಮಣ್ಯ ಭಟ್, ಆಯ್ಕೆ ಶ್ರೇಣಿ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್. ಆರ್, ಕ್ರೀಡಾ ಸಂಯೋಜಕಿ ಜ್ಯೋತಿ. ಪಿ.ರೈ, ಕ್ರೀಡಾ ಕಾರ್ಯದರ್ಶಿ ಹಿತೇಶ್ ಎಚ್.ಎಸ್ ವೇದಿಕೆಯಲ್ಲಿದ್ದರು