Ad Widget

ಅರಂತೋಡು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

. . . . .

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು.
ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಂಪಾಜೆ ವಲಯ ಇದರ ಆಶ್ರಯದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜ್ ಅರಂತೋಡು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರು ಅವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಧ್ಯವರ್ಜನ ಶಿಬಿರ ಹಾಗೂ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸುವುದರ ಮೂಲಕ ಮುಂದಿನ ಯುವ ಜನಾಂಗಕ್ಕೆ ದುಶ್ಚಟ ಮುಕ್ತ ಜೀವನ ನಡೆಸಲು ಪ್ರೇರಣೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ಡಾ ಅನುರಾಧಾ ಕುರುಂಜಿ ಇವರು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ ಮಕ್ಕಳು ಇತ್ತೀಚಿಗಿನ ದಿವಸದಲ್ಲಿ ಪುಸ್ತಕದ ಜೊತೆಗೆ ವಿದ್ಯಾಭ್ಯಾಸವನ್ನು ಉತ್ತಮ ರೀತಿಯಲ್ಲಿ ಬೆಳೆಸುವುದರ ಜೊತೆಗೆ ದುಶ್ಚಟಗಳ ಬಗ್ಗೆ, ಮೊಬೈಲ್ ಬಳಕೆ ಕಡಿಮೆ ಮಾಡುವುದು, ಗಾಂಜಾ, ಅಫೀಮು, ಬೀಡಿ, ಸಿಗರೇಟ್, ಗುಡ್ಕ, ಇದರಿಂದ ದೂರ ಇರುವಂತೆ ಇಂತಹ ಹಲವಾರು ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ವಲಯ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಸೋಮಶೇಖರ್ ಪೈಕ ಹಾಗೂ ಅರಂತೋಡು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರತ್ನಾವತಿ ಅಳಿಕೆಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜು ಪ್ರಾಂಶುಪಾಲರಾದ ಸುರೇಶ್ ವಾಗ್ಲೆ ಅವರು ಇಂತಹ ಕಾರ್ಯಕ್ರಮಗಳು ನಮ್ಮ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದ್ದು ಸಂಪನ್ಮೂಲ ವ್ಯಕ್ತಿಗಳು ಹೇಳಿದ ಮಾಹಿತಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಉತ್ತಮ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿಗಳಾದ ಸುಪ್ರಿತ.ಕೆ, ಕಲ್ಪನಾ, ಸುಂದರ ಹಾಗೂ ವಿಎಲ್ಎ ಪುನೀತ್ ರವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತವನ್ನು ಮೇಲ್ವಿಚಾರಕರು ಹಾಗೂ ವಂದನಾರ್ಪಣೆಯನ್ನು ಮೋಹನ್ ಚಂದ್ರ ಉಪನ್ಯಾಸಕರು ಕಾರ್ಯಕ್ರಮದ ನಿರೂಪಣೆಯನ್ನು ವಲಯ ಮೇಲ್ವಿಚಾರಕರು ಗಂಗಾಧರ್ ಅವರು ನೆರವೇರಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!