ಸುಬ್ರಹ್ಮಣ್ಯ ಸೆಪ್ಟೆಂಬರ್ 19: ಏನೆಕಲ್ಲು ಗ್ರಾಮದ ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಯೋಗ ಖಾತರಿ ಯೋಜನೆ ಹಾಗೂ ತಾಲೂಕು ಪಂಚಾಯತ್ ಅನುದಾನದ ರೂ. 5,20,000/= ದಲ್ಲಿ ವಿಕಲಚೇತನ ಸ್ನೇಹಿ ಶೌಚಾಲಯವನ್ನು ಬುಧವಾರ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗಿರಥಿ ಮುರುಳ್ಯ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ ನಾಯರ್ ಶಾಲಾ ವಿದ್ಯಾರ್ಥಿಗಳಿಗೆ ಕೊಡ ಮಾಡಿದ ಗುರುತಿನ ಪತ್ರಗಳನ್ನ ಶಾಸಕರು ವಿದ್ಯಾರ್ಥಿಗಳಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ. ಸಿ.ಅಧ್ಯಕ್ಷ ವಿಶ್ವನಾಥ ಬಾಲಾಡಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರುಗಳಾದ ಶಿವರಾಮ ನಿಕ್ರಾಜೆ, ಭವ್ಯ ಜೇನುಕೊಡಿ, ಪುಷ್ಪಲತಾ, ಜಯಂತಿ ಪರಮಲೆ, ಮೋಹನ ಗೌಡ ಕೋಟಿ ಗೌಡನ ಮನೆ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ, ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರುಗಳು, ವಿದ್ಯಾರ್ಥಿವೃಂದ, ಅಂಗನವಾಡಿ ಪುಟಾಣಿಗಳು, ಊರ ಗಣ್ಯರು, ಪೋಷಕರು, ಅಂಗನವಾಡಿ ಸಿಬ್ಬಂದಿಯವರು ಹಾಜರಿದ್ದರು.
- Thursday
- November 21st, 2024