Ad Widget

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಪೋಷಣ್ ಮಾಹ

. . . . . . .

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 21/09/2024 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕಾಲೇಜಿನ ಕೌಮಾರಭೃತ್ಯ ಹಾಗೂ ಸ್ವಸ್ಥವೃತ್ತ ವಿಭಾಗದ ಸಹಯೋಗದೊಂದಿಗೆ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದ 7ನೇ ರಾಷ್ಟ್ರೀಯ ಪೋಷಣ್ ಮಾಹದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಧರ್ ಡಿ ವಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಸ್ವಸ್ಥವೃತ್ತ ವಿಭಾಗದ ಸಹ ಪ್ರಾಧ್ಯಾಪಕಿಯಾದ ಡಾ. ಶಭೀನಾ ಟಿ ಟಿ ಯವರು ಸರಿಯಾದ ಪೋಷಣೆಯ ಮಹತ್ವ ಹಾಗೂ ಆಯುರ್ವೇದದಲ್ಲಿ ತಿಳಿಸಿರುವ ಮಕ್ಕಳ ಹಾಗೂ ಸ್ತ್ರೀ ಪೋಷಣೆಯ ಕುರಿತು ಪ್ರಾತ್ಯಕ್ಷಿಕೆ ನೀಡಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಚಿನ್ಮಯಿ, ಮೌಲ್ಯ ಪ್ರಾರ್ಥಿಸಿ, ವಿನಾಯಕ್ ಸ್ವಾಗತಿಸಿ, ಚೇತನ ವಂದಿಸಿದರು. ಅನನ್ಯ ಹಾಗೂ ಸ್ವಾತಿ ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾದ ಡಾ. ಹರ್ಷಿತಾ ಎಂ, ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ ಎ, ಸಂಸ್ಥೆಯ ಭೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಪದವಿ ವಿದ್ಯಾರ್ಥಿಗಳು ಹಾಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!